newsics.com
ಮಡಿಕೇರಿ: ಒಂದೇ ಕುಟುಂಬದ ನಾಲ್ವರನ್ನು ಕತ್ತಿಯಿಂದ ಕಡಿದು ಹತ್ಯೆ ಮಾಡಿರುವ ಘಟನೆ ದಕ್ಷಿಣ ಕೊಡಗಿನ ಪೊನ್ನಂಪೇಟೆ ಬಳಿ ನಡೆದಿದೆ.
ಪೊನ್ನಂಪೇಟೆಯ ಬೇಗೂರು ಗ್ರಾಮದಲ್ಲಿ ಗುರುವಾರ ಅಪರಾಹ್ನ 2.30ರ ಸುಮಾರಿಗಡ ಈ ಘಟನೆ ನಡೆದಿದ್ದು, ಮೃತರನ್ನು ಕರಿಯ, ಗೌರಿ ನಾಗಿ ಹಾಗೂ ಆರು ವರ್ಷದ ಮಗು ಕಾವೇರಿ ಎಂದು ಗುರುತಿಸಲಾಗಿದೆ.
ಆರೋಪಿ ಗಿರೀಶ್ ಎಂಬಾತ ಈ ಕೃತ್ಯ ಎಸಗಿರುವುದಾಗಿ ಹೇಳಲಾಗಿದ್ದು, ಹತ್ಯೆಗೆ ಕಾರಣ ತಿಳಿದು ಬಂದಿಲ್ಲ.
ಪೊನ್ನಂಪೇಟೆ ಪೊಲೀಸರು ಸ್ಥಳಕ್ಕೆ ತೆರಳಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.