newsics.com
ನವದೆಹಲಿ: ಮನೆಯಲ್ಲಿ ಹಣ ದೊರೆತ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ನ್ಯಾ|ಯಶವಂತ್ ವರ್ಮಾ ವಿರುದ್ಧ ಪ್ರಕರಣ ದಾಖಲಿಸಲು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾ ಮಾಡಿದೆ. ಅಲ್ಲದೇ ಆಂತರಿಕ ತನಿಖೆ ನಡೆಯುತ್ತಿರುವ ಸಮಯದಲ್ಲಿ ಅದನ್ನು ಪ್ರಶ್ನಿಸುವುದು ಅಕಾಲಿಕವಾಗಿದೆ ಎಂದು ತಿಳಿಸಿದೆ.
ಅಕ್ರಮ ಹಣ ಪತ್ತೆಯಾದ ಹಿನ್ನೆಲೆಯಲ್ಲಿ ತನಿಖೆ ನಡೆಸಬೇಕು ಎಂದು ಕೋರಿ ಪಿಐಎಲ್ ಸಲ್ಲಿಕೆ ಮಾಡಲಾಗಿತ್ತು. ಇದರ ವಿಚಾರಣೆ ನಡೆಸಿದ ನ್ಯಾ|ಅಭಯ್ ಓಕಾ, ನ್ಯಾ|ಉಜ್ಜಲ್ ಭುಯಾನ್ ಅವರಿದ್ದ ಪೀಠ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂತರಿಕ ಪರಿಶೀಲನೆ ನಡೆಯುತ್ತಿದೆ. ವಿಚಾರಣೆ ಮುಕ್ತಾಯವಾದ ಬಳಿಕ ಸಿಜೆಐ ಬಳಿ ಹಲವು ಆಯ್ಕೆಗಳಿರುತ್ತವೆ. ಹೀಗಾಗಿ ಈಗ ರಿಟ್ ಅರ್ಜಿ ಪರಿಶೀಲಿಸುವುದು ಸರಿಯಲ್ಲ ಎಂದು ಹೇಳಿದೆ.
ನ್ಯಾ.ವರ್ಮಾರನ್ನು ಅಲಹಾಬಾದ್ ಹೈಕೋರ್ಟ್‌ಗೆ ವರ್ಗಾವಣೆ ಮಾಡಿರುವುದನ್ನು ಕೇಂದ್ರ ಸರ್ಕಾರ ಖಚಿತಪಡಿಸಿದೆ. ಅವರ ಮನೆಯಲ್ಲಿ ಹಣ ಕಂಡುಬಂದಿದ್ದ ಹಿನ್ನೆಲೆಯಲ್ಲಿ ಅವರನ್ನು ದೆಹಲಿ ಹೈಕೋರ್ಟ್‌ನಿಂದ ಅಲಹಾಬಾದ್ ಹೈಕೋರ್ಟ್‌ಗೆ ವರ್ಗಾವಣೆ ಮಾಡಲಾಗಿತ್ತು. ಆದರೆ ಈಗಲೇ ವರ್ಮಾ ಅವರಿಗೆ ನ್ಯಾಯಾಲಯದ ಕೆಲಸಗಳನ್ನು ವಹಿಸದಂತೆ ಸುಪ್ರೀಂಕೋರ್ಟ್ ಸೂಚಿಸಿದೆ.
ಅಲಹಾಬಾದ್ ಹೈಕೋರ್ಟ್‌ಗೆ ನ್ಯಾ|ವರ್ಮಾ ಅವರ ವರ್ಗಾವಣೆಯನ್ನು ಖಂಡಿಸಿರುವ ಅಲ್ಲಿನ ವಕೀಲರ ಸಂಘ, ಶುಕ್ರವಾರವೂ ಪ್ರತಿಭಟನೆಯನ್ನು ಮುಂದುವರಿಸಿದೆ. ಇದು ಭಾರತದ ನ್ಯಾಯಾಂಗ ವ್ಯವಸ್ಥೆಯಲ್ಲಿ ಕರಾಳದಿನ ಎಂದು ಕರೆದಿದೆ.
Hotel and Restaurant ಇನ್ಮುಂದೆ ಹೋಟೆಲ್-ರೆಸ್ಟೋರೆಂಟ್‌ಗಳಲ್ಲಿ ಸೇವಾ ಶುಲ್ಕ ನಿಷೇಧ : ದೆಹಲಿ ಹೈಕೋರ್ಟ್ ಆದೇಶ