newsics.com
ಮಲಯಾಳಂ ಸೂಪರ್‌ಸ್ಟಾರ್ ಮೋಹನ್‌ಲಾಲ್ , ಪೃಥ್ವಿರಾಜ್ ಸುಕುಮಾರನ್ ಅಭಿನಯದ L2: ಎಂಪುರಾನ್ ಸಿನಿಮಾ ಮಾರ್ಚ್ 27ರಂದು ತೆರೆ ಕಂಡಿತ್ತು. 17 ದೃಶ್ಯಗಳಿಗೆ ಕತ್ತರಿ ಹಾಕಲು ನಿರ್ಧರಿಸಿದೆ. ಈ ಬೆನ್ನಲ್ಲೇ ನಾಯಕ ನಟ ಮೋಹನ್ ಲಾಲ್ ತಮ್ಮ ಅಭಿಮಾನಿಗಳಿಗೆ ಕ್ಷಮೆಯಾಚಿಸಿದ್ದಾರೆ.
ಎಲ್2: ಎಂಪುರಾನ್ ಸಿನಿಮಾ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಆದರೆ ಈ ಸಿನಿಮಾದಲ್ಲಿ 2002ರ ಗುಜರಾತ್ ಗಲಭೆಯನ್ನು ಉಲ್ಲೇಖ ಮಾಡಲಾಗಿದೆ. ಜೊತೆಗೆ ಈ ಘಟನೆಯನ್ನು ತಿರುಚಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಹೀಗಾಗಿ ಸಿನಿಮಾದ 17 ದೃಶ್ಯಗಳಿಗೆ ಕತ್ತರಿ ಹಾಕಲು ಚಿತ್ರತಂಡ ನಿರ್ಧರಿಸಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಮೋಹನ್ ಲಾಲ್ ಅಭಿಮಾನಿಗಳಿಗೆ ಕ್ಷಮೆ ಕೋರಿದ್ದಾರೆ.
ಎಲ್2: ಎಂಪುರಾನ್ ಚಿತ್ರದಿಂದ ಅಭಿಮಾನಿಗಳಿಗೆ ಉಂಟಾದ ನೋವಿಗೆ ನಾನು ಕ್ಷಮೆ ಕೋರುತ್ತೇನೆ. ಕೆಲ ದೃಶ್ಯಗಳಲ್ಲಿ ಗುಜರಾತ್ ಗಲಭೆಯ ಉಲ್ಲೇಖ ಮಾಡಲಾಗಿದೆ ಎಂಬ ಕಾರಣಕ್ಕೆ ಚಿತ್ರತಂಡವು 17 ದೃಶ್ಯಗಳನ್ನು ತೆಗೆದುಹಾಕಲು ನಿರ್ಧರಿಸಿದೆ.ಲೂಸಿಫರ್‌ನ 2ನೇ ಭಾಗವಾದ ಎಂಪುರಾನ್ ಚಿತ್ರದಲ್ಲಿ ಹೊರಹೊಮ್ಮಿದ ಕೆಲವು ರಾಜಕೀಯ, ಸಾಮಾಜಿಕ ವಿಷಯಗಳು ನನ್ನ ಅನೇಕ ಅಭಿಮಾನಿಗಳಿಗೆ ನಿರಾಸೆ ತರಿಸಿದೆ. ಕಲಾವಿದನಾಗಿ ನನ್ನ ಯಾವುದೇ ಚಲನಚಿತ್ರಗಳು ರಾಜಕೀಯ ಚಳವಳಿ, ಪರಿಕಲ್ಪನೆ ಅಥವಾ ಧರ್ಮದ ಬಗ್ಗೆ ದ್ವೇಷ ಭಾವನೆ ಮೂಡಿಸದಂತೆ ನೋಡಿಕೊಳ್ಳುವುದು ನನ್ನ ಕರ್ತವ್ಯ. ಹಾಗಾಗಿ ಎಂಪುರಾನ್ ತಂಡದ ಪರವಾಗಿ ನನ್ನ ಅಭಿಮಾನಿಗಳಿಗೆ ಕ್ಷಮೆ ಕೇಳುತ್ತೇನೆ ಎಂದು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.