newsics.com
ಹುಬ್ಬಳ್ಳಿ: ಬಿಜೆಪಿಯಿಂದ ಉಚ್ಚಾಟಿಸಲ್ಪಟ್ಟಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಮತ್ತೊಂದು ನಡೆ ರಾಜಕೀಯ ಚರ್ಚೆಗೆ ಗ್ರಾಸವಾಗಿದೆ.
ಹುಬ್ಬಳ್ಳಿಯಲ್ಲಿ ಸೋಮವಾರ ಅವರು ಕಾಂಗ್ರೆಸ್ ಪಕ್ಷದ ಧಾರವಾಡ ಗ್ರಾಮೀಣ ಘಟಕದ ಅಧ್ಯಕ್ಷ ಅನಿಲ್ ಕುಮಾರ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.
ಇಂದು ಬಸನಗೌಡ ಪಾಟೀಲ್ ಯತ್ನಾಳ್ ಕೊಪ್ಪಳಕ್ಕೆ ಭೇಟಿ ನೀಡಿ ತಮ್ಮ ಬೆಂಬಲಿಗರೊಂದಿಗೆ ಚರ್ಚೆ ನಡೆಸಲಿದ್ದಾರೆ.