Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ದೆಹಲಿ‌ ಮಳೆ ಅವಾಂತರ: ಇನ್ನಿಬ್ಬರು ಮಕ್ಕಳ ಶವ ಪತ್ತೆ, ಮೃತರ ಸಂಖ್ಯೆ 11ಕ್ಕೇರಿಕೆ, ಜನಜೀವನ ಅಸ್ತವ್ಯಸ್ತ
ದೇಶಪ್ರಮುಖ

ದೆಹಲಿ‌ ಮಳೆ ಅವಾಂತರ: ಇನ್ನಿಬ್ಬರು ಮಕ್ಕಳ ಶವ ಪತ್ತೆ, ಮೃತರ ಸಂಖ್ಯೆ 11ಕ್ಕೇರಿಕೆ, ಜನಜೀವನ ಅಸ್ತವ್ಯಸ್ತ

Share
1 Min Read
SHARE

newsics.com

ನವದೆಹಲಿ: ಶುಕ್ರವಾರ ಸುರಿದ ಭಾರೀ ಮಳೆಯಿಂದಾಗಿ ಉತ್ತರ ದೆಹಲಿಯ ಸಮಯಪುರ ಬದ್ಲಿ ಪ್ರದೇಶದಲ್ಲಿ ಶನಿವಾರದಂದು ಜಲಾವೃತವಾದ ಅಂಡರ್‌ಪಾಸ್‌ನಲ್ಲಿ ಮುಳುಗಿ ಇಬ್ಬರು ಬಾಲಕರು ಸಾವನ್ನಪ್ಪಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 11ಕ್ಕೆ ಏರಿದೆ.

ಶನಿವಾರ ಮಧ್ಯಾಹ್ನ 2.25ರ ಸುಮಾರಿಗೆ ಸಿರಸ್‌ಪುರ ಅಂಡರ್‌ಪಾಸ್ ಬಳಿ 12 ವರ್ಷದ ಬಾಲಕ ನೀರಿನಲ್ಲಿ ಮುಳುಗಿದ ಬಗ್ಗೆ ತಮಗೆ ಕರೆ ಬಂದಿತ್ತು. ಕೂಡಲೇ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿದ್ದರು. ಅಗ್ನಿಶಾಮಕ ದಳವು ತನ್ನ ರಕ್ಷಣಾ ವಾಹನಗಳನ್ನು ರವಾನಿಸಿತು ಎಂದು ಉಪ ಪೊಲೀಸ್ ಆಯುಕ್ತ (ಹೊರ-ಉತ್ತರ) ಆರ್‌ಕೆ ಸಿಂಗ್ ತಿಳಿಸಿದ್ದಾರೆ.

ಮೆಟ್ರೋ ಬಳಿಯ ಅಂಡರ್‌ಪಾಸ್‌ನಲ್ಲಿ ಸುಮಾರು 3 ಅಡಿಗಿಂತಲೂ ಹೆಚ್ಚು ನೀರಿನಿಂದ ತುಂಬಿರುವುದು ಕಂಡುಬಂದಿತ್ತು. ಅಗ್ನಿಶಾಮಕ ದಳವು ಶೋಧ ಕಾರ್ಯಾಚರಣೆ ನಡೆಸಿ ಇಬ್ಬರು ಬಾಲಕರ ಶವವನ್ನು ಹೊರತೆಗೆದಿದೆ ಎಂದು ಡಿಸಿಪಿ ತಿಳಿಸಿದ್ದಾರೆ.

ಇಬ್ಬರೂ ಬಾಲಕರನ್ನು ತಕ್ಷಣವೇ ಬಾಬು ಜಗಜೀವನ್ ರಾಮ್ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಪ್ರಯೋಜನವಾಗಲಿಲ್ಲ.
ಬಾಲಕರು ಈಜಾಡುವ ಸಲುವಾಗಿ ನೀರಿಗೆ ಇಳಿದಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಆಗ್ನೇಯ ದೆಹಲಿಯ ಓಖ್ಲಾ ಪ್ರದೇಶದಲ್ಲಿ ಶುಕ್ರವಾರ ಸ್ಕೂಟರ್‌ನಲ್ಲಿ ಹೋಗುತ್ತಿದ್ದ 60 ವರ್ಷದ ವ್ಯಕ್ತಿಯೊಬ್ಬರು ನೀರಿನಿಂದ ತುಂಬಿರುವ ಅಂಡರ್‌ಪಾಸ್‌ನಲ್ಲಿ ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ.

ಉತ್ತರಾಖಂಡ್‌ನಲ್ಲೂ ಮಳೆ ಆರ್ಭಟ ಮುಂದುವರಿದಿದ್ದು, ಹರಿದ್ವಾರದಲ್ಲಿ ನೂರಾರು‌ ಕಾರುಗಳು ಪ್ರವಾಹದಲ್ಲಿ‌ ಕೊಚ್ಚಿ ಹೋಗಿವೆ.

ಹೃದಯದ ಭಾಗಗಳಿಗೆ ಹುಡುಗಿಯರ ಹೆಸರು! ಪರೀಕ್ಷೆಯಲ್ಲಿ ವಿದ್ಯಾರ್ಥಿಯ ಉತ್ತರ ವೈರಲ್

T20 World cup 2024 ದೆಹಲಿ ಏರ್‌ಪೋರ್ಟ್‌ನಲ್ಲಿ ಅಂತಿಮ ಪಂದ್ಯ ವೀಕ್ಷಿಸಿದ ಸಿದ್ದರಾಮಯ್ಯ, ವಿಡಿಯೋ ವೈರಲ್

Cow Dung Soup! ಈ ದೇಶದಲ್ಲಿ ಹಸುವಿನ ಸಗಣಿಯಿಂದ ತಯಾರಾಗುತ್ತೆ ವಿಶೇಷ್ ಸೂಪ್

ದರ್ಶನ್‌ ಭೇಟಿಗೆ ಮುಂದಾದ ನಟ, ನಟಿಯರು: ಬದಲಾಯ್ತಾ ಸ್ಯಾಂಡಲ್‌ವುಡ್ ಮಂದಿಯ ಧೋರಣೆ?

TAGGED:Delhi rain disaster Two more children found dead death toll rises to 11 life disrupted newsics
Share This Article
Facebook Twitter Copy Link Print
Previous Article ಹೃದಯದ ಭಾಗಗಳಿಗೆ ಹುಡುಗಿಯರ ಹೆಸರು! ಪರೀಕ್ಷೆಯಲ್ಲಿ ವಿದ್ಯಾರ್ಥಿಯ ಉತ್ತರ ವೈರಲ್
Next Article 13 ವರ್ಷ ಬಳಿಕ T20 ವಿಶ್ವಕಪ್ 2024‌ ಗೆದ್ದು ಬೀಗಿದ ರೋಹಿತ್ ಪಡೆ

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?