newsics.com
ಕೋಲಾರ: ಕುಡಿದ ಮತ್ತಿನಲ್ಲಿ ಸ್ನೇಹಿತರ ನಡುವೆ ಜಗಳವಾಗಿ, ಕೊಲೆಯಲ್ಲಿ ಅಂತ್ಯವಾದ ಘಟನೆ ಕೋಲಾರ ಜಿಲ್ಲೆ ಮುಳಬಾಗಿಲು ನಗರದ ಹೊರವಲಯದಲ್ಲಿರುವ ಬಾರ್ ಎದುರು ನಡೆದಿದೆ. ಮುಳಬಾಗಿಲು ಹೈದರ್ ನಗರ ನಿವಾಸಿ ಮತೀನ್ (25) ಕೊಲೆಯಾದ ವ್ಯಕ್ತಿ ಎಂದು ತಿಳಿದು ಬಂದಿದೆ.
ಸ್ನೇಹಿತ ಮೊಯಿನ್‌ನಿಂದಲೇ ಮತೀನ್ ಹತ್ಯೆಯಾಗಿದ್ದಾನೆ.
ಬಾರ್‌ನಲ್ಲಿ ಕುಡಿದ ಬಳಿಕ ಎದುರಿಗೆ ಇದ್ದ ಮರದ ಕೆಳಗೆ ಮತೀನ್ ಹಾಗೂ ಮೊಯಿನ್ ಗಲಾಟೆ ಮಾಡಿಕೊಂಡಿದ್ದಾರೆ. ಈ ವೇಳೆ ಮತೀನ್ ಸ್ನೇಹಿತ ಮೊಯಿನ್‌ನನ್ನು ಅವಾಚ್ಯವಾಗಿ ನಿಂದಿಸಿ ಹಲ್ಲೆ ಮಾಡಿದ್ದಾನೆ. ಈ ವೇಳೆ ಕೋಪಗೊಂಡ ಮೊಯಿನ್ ಕಬ್ಬಿಣದ ರಾಡ್‌ನಿಂದ ಮತೀನ್‌ಗೆ ಇರಿದು ಪರಾರಿಯಾಗಿದ್ದಾನೆ.
ಕೊಲೆಯ ದೃಶ್ಯಗಳು ಬಾರ್‌ಗೆ ಅಳವಡಿಸಿದ್ದ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
https://www.newsics.com/2025/03/31/rcb-dominates-instagram-too/