Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > Accidnet ಕಾರು-ಟಿಟಿ ನಡುವೆ ಭೀಕರ ಅಪಘಾತ: ಇಬ್ಬರು ಸಾವು
ಕರ್ನಾಟಕ

Accidnet ಕಾರು-ಟಿಟಿ ನಡುವೆ ಭೀಕರ ಅಪಘಾತ: ಇಬ್ಬರು ಸಾವು

Share
1 Min Read
SHARE

newsics.com

ಚಾಮರಾಜನಗರ: ಕಾರು ಹಾಗೂ ಟಿಟಿ ವಾಹನದ ನಡುವೆ ಮುಖಾಮುಖಿ ಭೀಕರ ಅಪಘಾತ ಸಂಭವಿಸಿದ್ದು , ಕೇರಳ ಮೂಲದ ಇಬ್ಬರು ಸಾವನ್ನಪ್ಪಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ‌ ಮೈಸೂರು ಗುಂಡ್ಲುಪೇಟೆ ರಾಷ್ಟ್ರೀಯ ಹೆದ್ದಾರಿ 766ರ ಬೆಂಡಗಳ್ಳಿ ಗೇಟ್ ಸಮೀಪ ಮಂಗಳವಾರ ಸಂಭವಿಸಿದೆ.

ಕೇರಳ ಮೂಲದ ಶಾಷಿದ್ (30) ಹಾಗೂ ಮುಷ್ಕಾನ್ (19) ಮೃತರು. ಇವರ ಜೊತೆಗಿದ್ದ ಶಾಜೀಯಾ ಎಂಬುವರಿಗೆ ತೀವ್ರ ಪೆಟ್ಟಾಗಿದ್ದು, ಸ್ಥಿತಿ ಚಿಂತಾಜನಕವಾಗಿದೆ. ಟಿಟಿ ವಾಹನ ಚಾಲಕ ನಂಜನಗೂಡಿನ‌ ನಗರ್ಲೆ ಗ್ರಾಮದ ಸಾಗರ್ (32) ಎಂಬಾತನ ಕಾಲು ಮುರಿದಿದೆ. ಘಟನೆಯಲ್ಲಿ ಉಳಿದ 8 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ನಂಜನಗೂಡಿನಿಂದ ಊಟಿಗೆ ತೆರಳುತ್ತಿದ್ದ ಟಿಟಿ ವಾಹನ ಹಾಗೂ ರಂಜಾನ್ ಪ್ರವಾಸಕ್ಕಾಗಿ ಮೈಸೂರು ಕಡೆಗೆ ಬರುತ್ತಿದ್ದ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಕಾರಿನಲ್ಲಿ ಕೇರಳ ಮೂಲದ ಒಂದೇ ಕುಟುಂಬದ 8 ಮಂದಿ ಮಕ್ಕಳೊಡನೆ ಹೋಗುತ್ತಿದ್ದರು. ಇದರಲ್ಲಿ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಟಿಟಿ ವಾಹನದಲ್ಲಿ ತೆರಳುತ್ತಿದ್ದ ಚಾಲಕ ಸೇರಿ ಸುಮಾರು 5ರಿಂದ 6 ಮಂದಿಗೆ ಗಾಯಗೊಂಡಿದ್ದಾರೆ.

https://www.newsics.com/2025/04/01/jailed-former-prime-minister-imran-khan-nominated-for-nobel-peace-prize/

TAGGED:#Fatal #accident #carTT #death #police
Share This Article
Facebook Twitter Copy Link Print
Previous Article ಜೈಲಿನಲ್ಲಿರುವ ಮಾಜಿ ಪ್ರಧಾನಿ ಇಮ್ರಾನ್ ಖಾನ್ ನೊಬೆಲ್ ಶಾಂತಿ ಪ್ರಶಸ್ತಿಗೆ ನಾಮನಿರ್ದೇಶನ
Next Article GOOD NEWS IPL ಪಂದ್ಯ ವೀಕ್ಷಿಸಲು ನಮ್ಮ ಮೆಟ್ರೋ ಸೇವೆ ಅವಧಿ ವಿಸ್ತರಣೆ

Popular Posts

India’s first medal ಕಾಮನ್‌ವೆಲ್ತ್ ಗೇಮ್ಸ್ 2026: ಭಾರತಕ್ಕೆ ಮೊದಲ ಪದಕ; ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಜಂಡು ಕುಮಾರ್‌ಗೆ ಕಂಚಿನ ಶುಭಾರಂಭ

2 Min Read

Chaturmasya ಚಾತುರ್ಮಾಸ್ಯದಿಂದ ಅಧ್ಯಾತ್ಮ ಮತ್ತು ಆರೋಗ್ಯ ಲಾಭಗಳು

1 Min Read

Modi Another Video Viralಥ್ಯಾಂಕ್ ಯು ಫ್ರೆಂಡ್ಸ್’ ಎಂದ ಪ್ರಧಾನಿ ಮೋದಿ

2 Min Read

Devshayani Ekadashi ದೇವಶಯನಿ ಏಕಾದಶಿ: ಶ್ರೀ ವಿಷ್ಣುವಿನ ನಾಲ್ಕು ತಿಂಗಳ ಯೋಗನಿದ್ರೆಯ ರಹಸ್ಯವೇನು?

1 Min Read

You Might Also Like

ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಕರ್ನಾಟಕ

Prajwal Revanna : ಚೆನ್ನಮ್ಮ ಅವರ ಅಂತ್ಯಕ್ರಿಯೆ: ಜೈಲಿನಿಂದಲೇ ಅಜ್ಜಿಗೆ ಅಂತಿಮ ನಮನ ಸಲ್ಲಿಸಿದ ಪ್ರಜ್ವಲ್ ರೇವಣ್ಣ

2 Min Read
ಕರ್ನಾಟಕಪ್ರಮುಖ

Today Weather Report ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ: ಕರಾವಳಿಯಲ್ಲಿ ಭಾರಿ ಮಳೆ, ಒಳನಾಡಿನಲ್ಲಿ ಬಿರುಗಾಳಿ ಎಚ್ಚರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?