newsics.com
ಭಾರತದಲ್ಲಿ ಸಾಕಷ್ಟು ವಿವಾದಗಳ ಸುಳಿಯಲ್ಲಿ ಸಿಲುಕಿ, ಇದೀಗ ಕೈಲಾಸ ಎಂಬ ದೇಶವನ್ನು ನಿರ್ಮಾಣ ಮಾಡಿ ಅಲ್ಲಿ ತನ್ನ ಶಿಷ್ಯರೊಂದಿಗೆ ವಾಸವಾಗಿರುವ ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ಸ್ವಾಮಿಯ ಸಾವನ್ನಪ್ಪಿದ್ದಾರೆ ಎಂಬ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.
ನಿತ್ಯಾನಂದರು ಎರಡು ದಿನಗಳ ಹಿಂದೆ ನಿಧನರಾದರು ಎಂಬ ಸುದ್ದಿಯನ್ನು ಆತನ ಸೋದರಳಿಯ ಸುಂದರೇಶ್ವರನ್ ಹೇಳಿಕೊಂಡಿದ್ದು, ಈ ವಿಡಿಯೋ ವೈರಲ್ ಆಗುತ್ತಿದೆ. ನಿತ್ಯಾನಂದ ಸ್ವಾಮಿಯ ಸೋದರಳಿಯ ಸುಂದರೇಶ್ವರನ್ ತನ್ನ ಆಧ್ಯಾತ್ಮಿಕ ಪ್ರವಚನದ ವೀಡಿಯೊದಲ್ಲಿ ಹಿಂದೂ ಧರ್ಮವನ್ನು ರಕ್ಷಿಸಲು ನಿತ್ಯಾನಂದ ತನ್ನ ಪ್ರಾಣವನ್ನು ತ್ಯಾಗ ಮಾಡಿದ್ದಾರೆ ಎಂದು ಹೇಳಿರುವುದಾಗಿ ವರದಿಯಾಗಿದೆ.
ನಿತ್ಯಾನಂದ ಸ್ವಾಮಿಯ ಸೋದರಳಿಯ ಸ್ವತಃ ತಾನೇ ಸಾವಿನ ಸುದ್ದಿಯ ಬಗ್ಗೆ ಘೋಷಿಸಿದ್ದು, ವಿಡಿಯೋ ದಲ್ಲಿ ಅವರು ಅವರು ತಮ್ಮ ಜೀವನದುದ್ದಕ್ಕೂ ಹಿಂದೂ ಧರ್ಮಕ್ಕಾಗಿ ಶ್ರಮಿಸಿದರು ಎಂದು ಸ್ಮರಿಸಿದರು. ನಿತ್ಯಾನಂದರು ತಮ್ಮ ಆಧ್ಯಾತ್ಮಿಕ ಸಂದೇಶಗಳಿಂದ ಅನೇಕ ಭಕ್ತರ ಮೆಚ್ಚುಗೆಯನ್ನು ಗಳಿಸಿದರು, ಇಂದು ನಮ್ಮನ್ನು ಅಗಲಿದ್ದಾರೆ ಎನ್ನಲಾಗಿದೆ. ಆದರೆ ಇದರ ಸತ್ಯಾಸತ್ಯತೆ ಬಗ್ಗೆ ಇನ್ನೂ ತಿಳಿದು ಬರಬೇಕಿದೆ.
https://x.com/polimernews/status/1906897204075192652
https://www.newsics.com/2025/04/01/what-did-the-dog-do-after-hearing-hanuman-chalisa/