newsics.com
ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಸೇರಿ 7 ಆರೋಪಿಗಳಿಗೆ ನೀಡಿರುವ ಜಾಮೀನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಅರ್ಜಿಯ ವಿಚಾರಣೆ ಇಂದು ಸುಪ್ರೀಂಕೋರ್ಟ್‌ನಲ್ಲಿ ನಡೆದಿದೆ.
ಪರ್ದೀವಾಲ, ನ್ಯಾಯಮೂರ್ತಿ ಮಹದೇವನ್ ಪೀಠ ಅರ್ಜಿ ವಿಚಾರಣೆಯನ್ನು ಕೈಕೈಗೆತ್ತಿಕೊಂಡಿದ್ದು, ಅದರಂತೆ ಅರ್ಜಿ ವಿಚಾರಣೆ ನಡೆಸಿದೆ.
ಕಳೆದ ವರ್ಷ ದರ್ಶನ್ ಸೇರಿ 17ಮಂದಿಗೆ ಜಾಮೀನು ಸಿಕ್ಕಿತ್ತು. ಈ ಪೈಕಿ ದರ್ಶನ್, ಪವಿತ್ರಾಗೌಡ ಸೇರಿ 7 ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಅದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿತ್ತು.
ದರ್ಶನ್ ಜಾಮೀನು ರದ್ದು ಮಾಡಲು ರಾಜ್ಯ ಸರ್ಕಾರದ ಪ್ರಾಸಿಕ್ಯೂಷನ್ ಮನವಿ ಮಾಡಿದ್ದು, ಎ1 ಪವಿತ್ರಾಗೌಡ, ಎ2 ದರ್ಶನ್, ಎ6 ಜಗದೀಶ್, ಎ7 ಅನುಕುಮಾರ್, ಎ11 ನಾಗರಾಜ್, ಎ12 ಎಂ.ಲಕ್ಷ್ಮಣ್ ಹಾಗೂ ಎ 14 ಪ್ರದೂಶ್ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಂದೂಡಿದೆ.
ಏಪ್ರಿಲ್ 22 ರೊಳಗೆ ಆಕ್ಷೇಪಣೆ ಸಲ್ಲಿಸಲು ಆರೋಪಿ ಪರ ವಕೀಲರಿಗೆ ಕೋರ್ಟ್ ಸೂಚನೆ ನೀಡಿದೆ. ಏಪ್ರಿಲ್ 22 ರಂದು ಪ್ರಕರಣದ ಸಂಪೂರ್ಣ ವಿಚಾರಣೆ ನಡೆಸುವುದಾಗಿ ಪೀಠ ತಿಳಿಸಿದೆ.
Earthyquek ಭೂಕಂಪದಿಂದ ತತ್ತರಿಸಿದ ಮ್ಯಾನ್ಮಾರ್: ಸಾವಿನ ಸಂಖ್ಯೆ 3000 ಮೀರುವ ಸಾಧ್ಯತೆ