newsics.com
ಮಂಡ್ಯ: ಕೆಎಸ್ ಆರ್ ಟಿಸಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ತಾಲೂಕಿನ ತೂಬಿನಕೆರೆ ಗ್ರಾಮದ ಬಳಿ ನಡೆದಿದೆ.
ಮೈಸೂರಿನಿಂದ ಬೆಂಗಳೂರಿನತ್ತ ಬರುತ್ತಿದ್ದ ಐರಾವತ ಬಸ್, ಮಂಡ್ಯದ ತೂಬಿನಕೆರೆ ಎಕ್ಸಿಟ್‌ನಿಂದ ಮೈಸೂರು ಎಕ್ಸ್ಪ್ರೆಸ್ ವೇಗೆ ನುಗ್ಗಿದ ಕಾರ್ ಗೆ ಡಿಕ್ಕಿ ಹೊಡೆದಿದೆ.
ಇಬ್ಬರು ಮಹಿಳೆಯರು ಮತ್ತು ಇಬ್ಬರು ಪುರುಷರ ಸಾವನ್ನಪ್ಪಿದ್ದು, ಮಂಡ್ಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ಕೈಗೊಂಡಿದ್ದಾರೆ. ಈ ಸಂಬಂಧ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..