newsics.com
ಬೆಂಗಳೂರು: ದೇಶದಲ್ಲಿ ಮೊದಲ ಬಾರಿಗೆ ಸಿಲಿಕಾನ್ ಸಿಟಿಯಲ್ಲಿ ಮಂಗಳಮುಖಿಯರಿಗಾಗಿ ಪ್ರತ್ಯೇಕ ಶೌಚಾಲಯದ ವ್ಯವಸ್ಥೆಯನ್ನು ಮಾಡಲಾಗಿದೆ.
ರೋಟರಿ ಇಂಟರ್‌ನ್ಯಾಷನಲ್ ಡಿಸ್ಟ್ರಿಕ್ಟ್ 3192, ಸುಲಭ್ ಇಂಟರ್‌ನ್ಯಾಷನಲ್ ಸಹಯೋಗದಲ್ಲಿತೃತೀಯ ಲಿಂಗಿಗಳು ಒಳಗೊಂಡಂತೆ ಪ್ರತಿಯೊಬ್ಬರ ಬಳಕೆಗೆ l ಶೌಚಾಲಯ ನಿರ್ಮಾಣ ಮಾಡಲಾಗಿದ್ದು, ಇಂದು ಲೋಕಾರ್ಪಣೆಗೊಂಡಿದೆ.
ವಿಶೇಷವಾದ ಸುಲಭ ಶೌಚಾಲಯವನ್ನು ನಗರದ ಉಪ್ಪಾರಪೇಟೆ ಪೊಲೀಸ್ ಠಾಣೆಯ ಎದುರು ಸುಲಭ ಶೌಚಾಲಯ ವ್ಯವಸ್ಥೆ ಮಾಡಲಾಗಿದೆ.
ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ರೋಟರಿ ಕ್ಲಬ್ ನಿರ್ದೇಶಕ ಕೆ.ಪಿ ನಾಗೇಶ್ ಅವರು, ನಮ್ಮ ಸಂಸ್ಥೆ 120ನೇ ವರ್ಷಕ್ಕೆ ಕಾಲಿಟ್ಟಿದೆ. ಮೊದಲಿನಿಂದಲೂ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಾ ಬಂದಿದೆ. 120ನೇ ವಾರ್ಷಿಕೋತ್ಸವ ನೆನಪಿಗಾಗಿ ಬೆಂಗಳೂರಿನಲ್ಲಿ ಇಂತಹ ಶೌಚಾಲಯ ನಿರ್ಮಿಸಿದ್ದೆ. ಬೆಂಗಳೂರು ಮಾತ್ರವಲ್ಲದೇ ಮುಂದಿನ ದಿನಗಳಲ್ಲಿ ಪ್ರತಿ ಜಿಲ್ಲೆ, ತಾಲೂಕಿನಲ್ಲಿ ಇಂತಹ ಶೌಚಾಲಯ ನಿರ್ಮಿಸುವುದೇ ಉದ್ದೇಶವಾಗಿದೆ.
https://www.newsics.com/2025/04/03/passenger-danced-strangely-in-metro-coach/