newsics.com
ಅಕ್ಷಯ್ ಕುಮಾರ್ ಅಭಿನಯಿಸಿರುವ ಜಲಿಯನ್ವಾಲಾ ಬಾಗ್ ಹತ್ಯಾಕಾಂಡದ ಕುರಿತು ‘ಕೇಸರಿ: ಚಾಪ್ಟರ್ 2’ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದೆ.
‘ಕೇಸರಿ: ಚಾಪ್ಟರ್ 2’ ಸಿನಿಮಾವನ್ನು ಕರಣ್ ಸಿಂಗ್ ತ್ಯಾಗಿ ಅವರು ನಿರ್ದೇಶನ ಮಾಡಿದ್ದಾರೆ. ಅಕ್ಷಯ್ ಕುಮಾರ್, ಆರ್. ಮಾಧವನ್, ಅನನ್ಯಾ ಪಾಂಡೆ ಮುಂತಾದ ಕಲಾವಿದರು ‘ಕೇಸರಿ: ಚಾಪ್ಟರ್ 2’ ಸಿನಿಮಾದಲ್ಲಿ ನಟಿಸಿದ್ದಾರೆ. ಹೀರೂ ಯಶ್ ಜೋಹರ್, ಅರುಣಾ ಭಾಟಿಯಾ, ಕರಣ್ ಜೋಹರ್, ಆಧಾರ್ ಪೂನಾವಾಲ ಮುಂತಾದವರು ಈ ಸಿನಿಮಾಗೆ ಬಂಡವಾಳ ಹಾಕಿದ್ದಾರೆ.
1919ರ ಏಪ್ರಿಲ್ 13ರಂದು ಜಲಿಯನ್ವಾಲಾ ಬಾಗ್ ಹತ್ಯಾಕಾಂಡ ನಡೆಯಿತು. ಬ್ರಿಟಿಷ್ ಸರ್ಕಾರದ ಈ ಕೃತ್ಯವನ್ನು ನ್ಯಾಯಾಲಯದಲ್ಲಿ ಪ್ರಶ್ನೆ ಮಾಡಿದ ಲಾಯರ್ ಶಂಕರನ್ ನಾಯರ್ ಕುರಿತು ‘ಕೇಸರಿ: ಚಾಪ್ಟರ್ 2’ ಸಿನಿಮಾದಲ್ಲಿ ತಿಳಿಸಲಾಗಿದೆ. ಅಕ್ಷಯ್ ಕುಮಾರ್ ಹಾಗೂ ಇಡೀ ತಂಡಕ್ಕೆ ಶುಭವಾಗಲಿ’ ಎಂದು ಅಕ್ಷಯ್ ಕುಮಾರ್ ಅವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.
ಅಭಿಮಾನಿಗಳು ಮಾತ್ರವಲ್ಲದೇ ಬಾಲಿವುಡ್ನ ಹಲವು ಸೆಲೆಬ್ರಿಟಿಗಳು ಕೂಡ ‘ಕೇಸರಿ: ಚಾಪ್ಟರ್ 2’ ಸಿನಿಮಾದ ಟ್ರೇಲರ್ ಮೆಚ್ಚುಗೆ ಪಡೆದಿವೆ.