newsics.com
ತುಮಕೂರು: ದಿವ್ಯಾಂಗ ಮಕ್ಕಳ ಜೊತೆ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ
ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಅದಲಗೆರೆ ಗ್ರಾಮದಲ್ಲಿ ನಡೆದಿದೆ.
ವಿಜಯಲಕ್ಷ್ಮಿ(45), ಮಗಳು ಚೂಡಾಮಣಿ(23), ಪುತ್ರ ನರಸಿಂಹರಾಜು(14) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ಮೂವರೂ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಪತಿ ಮಹಾದೇವಯ್ಯ ಮನೆಯಲ್ಲಿ ಇಲ್ಲದಿದ್ದಾಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
https://www.newsics.com/2025/04/03/kesari-chapter-2-trailer-released/