newsics.com
ನವದೆಹಲಿ: ಚಂಡಮಾರುತದ ಹಿನ್ನಲೆ ಅನೇಕ ರಾಜ್ಯಗಳಲ್ಲಿ ಅತ್ಯಂತ ಹೆಚ್ಚಿನ ತಾಪಮಾನದ ಜೊತೆಗೆ ಮಳೆ ಸಹ ಬರಬಹುದು ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಏಪ್ರಿಲ್ ನಿಂದ ಜೂನ್ ವರೆಗೆ ಭಾರತದಲ್ಲಿ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಾಗಿರುತ್ತದೆ.
ದೆಹಲಿಯಲ್ಲಿ ತಾಪಮಾನ ಹೆಚ್ಚಾದಂತೆ, ಮುಂದಿನ ದಿನಗಳಲ್ಲಿ ಬಿಸಿ ಗಾಳಿ ಬೀಸುವ ಸಾಧ್ಯತೆ ಇದೆ. ಮಧ್ಯಪ್ರದೇಶ, ಮಹಾರಾಷ್ಟ್ರ, ಗುಜರಾತ್, ಆಂಧ್ರಪ್ರದೇಶ, ಛತ್ತೀಸ್‌ಗಢ ಮತ್ತು ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಹೆಚ್ಚಿನ ತಾಪಮಾನ ಮತ್ತು ಶಾಖದ ಅಲೆಗಳು ಬೀಸುವ ಸಾಧ್ಯತೆಯಿದೆ. ದಕ್ಷಿಣ ಮತ್ತು ಮಧ್ಯ ಕರ್ನಾಟಕದ ಜಿಲ್ಲೆಗಳಾದ ಮೈಸೂರು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಚಾಮರಾಜನಗರದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
https://www.newsics.com/2025/04/03/bhupana-gave-the-couch-the-shape-of-a-car/