newsics.com
ಕಲಬುರಗಿ : ಬೆಳ್ಳಂ ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ನಿಂತಿದ್ದ ಲಾರಿಗೆ ಮ್ಯಾಕ್ಸಿಕ್ಯಾಬ್ ಡಿಕ್ಕಿಯಾಗಿ ಐವರು ಮೃತಪಟ್ಟಿರುವ ಘಟನೆ ಜೇವರ್ಗಿ ತಾಲೂಕಿನ ನೆಲೋಗಿ ಕ್ರಾಸ್ ಬಳಿ ನಡೆದಿದೆ.
ಮ್ಯಾಕ್ಸಿಕ್ಯಾಬ್ ನಲ್ಲಿ ಸುಮಾರು 31 ಮಂದಿ ಪ್ರಯಾಣಿಸುತ್ತಿದ್ದರು, ವೇಗವಾಗಿ ಬರುತ್ತಿದ್ದ ಮ್ಯಾಕ್ಸಿಕ್ಯಾಬ್ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಚಾಲಕನ ಅಜಾಗರೂಕತೆಯಿಂದ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಮೃತರೆಲ್ಲರೂ ಬಾಗಲಕೋಟೆ ಮೂಲದವರು ಎಂದು ಹೇಳಲಾಗುತ್ತಿದೆ. ಅಪಘಾತದಲ್ಲಿ ಸ್ಥಳದಲ್ಲೇ ಐವರು ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ.ವಾಜೀದ್, ಮೆಹಬೂಬಿ, ಪ್ರಿಯಾಂಕಾ ಸೇರಿ ಐವರು ಮೃತಪಟ್ಟಿದ್ದಾರೆ.