newsics.com
ಒಟ್ಟಾವಾ: ಭಾರತೀಯ ಪ್ರಜೆಯೊಬ್ಬನಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಕೆನಡಾದ ರಾಕ್‌ಲ್ಯಾಂಡ್ ಪ್ರದೇಶದಲ್ಲಿ ನಡೆದಿದೆ.
ಒಟ್ಟಾವಾ ಬಳಿಯ ರಾಕ್‌ಲ್ಯಾಂಡ್‌ನಲ್ಲಿ ಚಾಕುವಿನಿಂದ ಇರಿದು ಭಾರತೀಯನನ್ನು ಕೊಲೆ ಮಾಡಿರುವ ದುರಂತದ ಘಟನೆಗೆ ನಾವು ತೀವ್ರ ದುಃಖಿತರಾಗಿದ್ದೇವೆ. ಶಂಕಿತ ಆರೋಪಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳೀಯ ಸಮುದಾಯ ಸಂಘದ ಮೂಲಕ ಕೊಲೆಯಾದ ವ್ಯಕ್ತಿಯ ಸಂಬಂಧಿಕರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸಲು ನಾವು ನಿಕಟ ಸಂಪರ್ಕದಲ್ಲಿದ್ದೇವೆ’ ಎಂದು ಭಾರತೀಯ ರಾಯಭಾರಿ ಕಚೇರಿ ಎಕ್ಸ್ ಪೋಸ್ಟ್‌ನಲ್ಲಿ ಹಂಚಿಕೊಂಡಿದೆ.
ಆರೋಪಿಯನ್ನು ಬಂಧಿಸಲಾಗಿದ್ದು, ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ.
https://www.newsics.com/2025/04/05/a-young-man-shared-a-tribute-post-to-himself/