newsics.com
ಬೀಳ್ಕೊಡುಗೆ ಸಮಾರಂಭದಲ್ಲಿ ಭಾಷಣಮಾಡುತ್ತಲೇ ಮಹಾರಾಷ್ಟ್ರದ ಧಾರಾಶಿವ್‌ನ ಕಾಲೇಜೊಂದರ ವಿದ್ಯಾರ್ಥಿನಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ.
ವರ್ಷಾ ಮೃತ ವಿದ್ಯಾರ್ಥಿನಿ. ಈಕೆ ಖರತ್ ಪರಂಡದ ಆರ್‌ಜಿ ಶಿಂಧೆ ಕಾಲೇಜಿನಲ್ಲಿ ಬೀಳ್ಕೊಡುಗೆ ಸಮಾರಂಭದಂದು ಸಂತೋಷದಿಂದ ಭಾಷಣ ಮಾಡುತ್ತಿದ್ದಳು. ಭಾಷಣ ಮಾಡುತ್ತಿದ್ದಾಗ ಅವರಿಗೆ ಹಠಾತ್ ಹೃದಯಾಘಾತವಾಗಿ ಸಾವು ಸಂಭವಿಸಿದೆ ಎನ್ನಲಾಗಿದೆ.
ವಿಡಿಯೋದಲ್ಲಿ ಏನಿದೆ?:ಬೀಳ್ಕೊಡುಗೆ ಸಮಾರಂಭದಂದು ಸಂತೋಷದಿಂದ ಭಾಷಣ ಮಾಡುತ್ತಿದ್ದಳು. ವರ್ಷಾ ಮಾತನಾಡುವಾಗ ಪ್ರಜ್ಞೆ ತಪ್ಪಿ ಬಿದ್ದ ಕಾರಣ ಅವರನ್ನು ಪರಾಂಡದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದರು.ವರ್ಷಾ 8 ವರ್ಷದವಳಿದ್ದಾಗ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು, ಆದರೆ ಕಳೆದ ಹನ್ನೆರಡು ವರ್ಷಗಳಿಂದ ಯಾವುದೇ ಆರೋಗ್ಯ ಸಮಸ್ಯೆಗಳು ಕಂಡುಬಂದಿರಲಿಲ್ಲ ಮತ್ತು ಯಾವುದೇ ಔಷಧಿಗಳನ್ನು ತೆಗೆದುಕೊಳ್ಳುತ್ತಿರಲಿಲ್ಲ. ಹಠಾತ್ ಹೃದಯಾಘಾತವಾಗಿ ಸಾವು ಸಂಭವಿಸಿದೆ ಎನ್ನಲಾಗಿದೆ.