newsics.com
ಬೆಂಗಳೂರು : ಬೆಲೆ ಏರಿಕೆ, ದಲಿತರ ಹಣ ಲೂಟಿ, ಮುಸ್ಲಿಂ ಓಲೈಕೆ, ರೈತರ ನಿರ್ಲಕ್ಷ್ಯ ಸಹಿತ ರಾಜ್ಯ ಸರಕಾರದ ವೈಫಲ್ಯಗಳ ವಿರುದ್ಧ ಅಹೋರಾತ್ರಿ ಧರಣಿ ನಡೆಸಿದ್ದ ಬಿಜೆಪಿ, ಈಗ 2ನೇ ಹಂತದ ಹೋರಾಟಕ್ಕೆ ಸಜ್ಜುಗೊಂಡಿದ್ದು, ಇಂದಿನಿಂದ ರಾಜ್ಯಾದ್ಯಂತ ಜನಾಕ್ರೋಶ ಯಾತ್ರೆಗೆ ಧುಮುಕಲಿದೆ.
ಮೈಸೂರಿನಿಂದಲೇ ಯಾತ್ರೆಗೆ ಚಾಲನೆ ದೊರೆಯಲಿದ್ದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸೇರಿದಂತೆ ಹಲವು ಮುಖಂಡರು ಬಿಜೆಪಿ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ. ಆದರೆ ಬಿಜೆಪಿ ದೋಸ್ತಿ ಜೆಡಿಎಸ್ ಈ ಯಾತ್ರೆಯಲ್ಲಿ ಭಾಗವಹಿಸುವುದು ಇನ್ನೂ ಸ್ಪಟಷ್ಟವಾಗಿಲ್ಲ.
ನಾಲ್ಕು ಹಂತಗಳಲ್ಲಿ ನಡೆಯಲಿರುವ ಈ ಪ್ರತಿಭಟನೆಯಿಂದ ಇಂದಿನಿಂದ ಪ್ರಾರಂಭಗೊಂಡು ಮೇ. 5 ಕ್ಕೆ ಮುಕ್ತಾಯಗೊಳ್ಳಲಿದೆ.