newsics.com
ದಕ್ಷಿಣ ಕನ್ನಡ: ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮಗನಿಂದಲೆ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆದಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪಿಎಸ್ಐ ಅಧಿಕಾರಿಯ ಪುತ್ರ ಮಂಜುನಾಥ್ ಎಂಬಾತ 17 ವರ್ಷದ ಬಾಲಕಿಯ ಮನೆಗೆ ಬಂದು ನೀರು ಕೇಳುವ ನೆಪದಲ್ಲಿ ಅತ್ಯಾಚಾರ ಎಸಗಿದ್ದು, ಬಳಿಕ ಇದೇ ವಿಚಾರವನ್ನು ಇಟ್ಟುಕೊಂಡು ಏಳೆಂಟು ಬಾರಿ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ. ಈ ಬಗ್ಗೆ ಬಾಯಿಬಿಟ್ಟರೆ ಕೊಲೆ ಮಾಡುವುದಾಗಿ ಬೆದರಿಕೆ ಕೂಡ ಹಾಕಿದ್ದ..
ಜೊತೆಗೆ ನಾನೊಬ್ಬ ಪೊಲೀಸ್ ಅಧಿಕಾರಿಯ ಮಗ ನನ್ನ ಮೇಲೆ ಯಾವುದೇ ದೂರು ದಾಖಲಾಗುವುದಿಲ್ಲ, ಒಂದು ವೇಳೆ ಈ ವಿಚಾರವನ್ನು ದೊಡ್ಡದು ಮಾಡಿದರೆ ನಿನ್ನ ಮೇಲೆ ಕೇಸ್ ಹಾಕಿಸಿ ಜೈಲಿಗೆ ಹಾಕಿಸುತ್ತೇನೆ ಎಂದು ಎಚ್ಚರಿಕೆ ನೀಡಿದ್ದ ಎನ್ನಲಾಗಿದೆ.
ಸದ್ಯ ಬಾಲಕಿ ಗರ್ಭಿಣಿಯಾದ ಬಳಿಕ ಈ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದೆ. ಇನ್ನು ಘಟನೆಗೆ ಸಂಬಂಧ ಪೋಕ್ಸೋ ಕಾಯಿದೆ ದಾಖಲಾಗಿದ್ದು, ಆರೋಪಿ ಮಂಜುನಾಥನನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಜೊತೆಗೆ ತಂದೆ ಪಿಎಸ್ಐ ಗೆ ವಿಷಯ ಗೊತ್ತಿತ್ತಾ ಎಂದು ಕೂಡ ತನಿಖೆ ನಡೆಸಲಾಗುತ್ತಿದೆ.
ಇನ್ಮುಂದೆ ಮಕ್ಕಳ ಕೈಯಲ್ಲಿ ಟಾಯ್ಲೆಟ್ ಕ್ಲೀನ್ ಮಾಡಿಸಿದ್ರೆ ಕೇಸ್ ಬೀಳುತ್ತೆ