newsics.com
ಮೈಸೂರು: ಇಂದು ಪ್ರಕಟವಾದ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದ ವಿದ್ಯಾರ್ಥಿನಿಯೊಬ್ಬಳು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಕಲಾಮಂದಿರ ಅಪಾರ್ಟೆ್ಮಂಟ್ ನಲ್ಲಿ ನಡೆದಿದೆ.
ಐಶ್ವರ್ಯ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಒಂಟಿಕೊಪ್ಪಲಿನ ಸರ್ಕಾರಿ ಪಿಯು ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಈಕೆ ಫಲಿತಾಂಶ ಹೊರ ಬೀಳುತ್ತಿದ್ದಂತೆ, ಪರೀಕ್ಷೆಯಲ್ಲಿ ಫೇಲ್ ಆದ ಹಿನ್ನೆಲೆಯಲ್ಲಿ ಮನನೊಂದ ಮನೆಯಲ್ಲಿ ಯಾರು ಇಲ್ಲದ ವೇಳೆ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮನೆಯಲ್ಲಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
https://www.newsics.com/2025/04/08/puc-science-topper-amulya-kamat/