Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > RBI : ಎರಡನೇ ಬಾರಿ ಆರ್‌ಬಿಐ ರೆಪೋ ಕಡಿತ – ಬಡ್ಡಿದರಗಳ ಇಳಿಕೆ
ದೇಶಪ್ರಮುಖ

RBI : ಎರಡನೇ ಬಾರಿ ಆರ್‌ಬಿಐ ರೆಪೋ ಕಡಿತ – ಬಡ್ಡಿದರಗಳ ಇಳಿಕೆ

Share
1 Min Read
SHARE

newsics.com

ನವದೆಹಲಿ: ಭಾರತೀಯ ರಿಸರ್ವ್‌ ಬ್ಯಾಂಕ್‌ ಬುಧವಾರ(ಏ.09) ಸಾಲದ ಮೇಲಿನ ಬಡ್ಡಿ ದರವನ್ನು ಸತತ ಎರಡನೇ ಬಾರಿಗೆ ಇಳಿಕೆ ಮಾಡುವ ಮೂಲಕ ಗೃಹ ಮತ್ತು ವಾಹನ ಸಾಲಗಾರರಿಗೆ ದೊಡ್ಡ ರಿಲೀಫ್‌ ನೀಡಿದಂತಾಗಿದೆ.

ಆರ್‌ ಬಿಐನ ನೂತನ ಗವರ್ನರ್‌ ಸಂಜಯ್‌ ಮಲ್ಹೋತ್ರಾ ಅವರು ಅಧಿಕಾರ ಸ್ವೀಕರಿಸಿದ ನಂತರ ನಡೆದ ಆರ್‌ ಬಿಐನ ಎರಡನೇ ಹಣಕಾಸು ನೀತಿ ಸಮಿತಿ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಂಡಿರುವುದಾಗಿ ವರದಿ ತಿಳಿಸಿದೆ.

ಸೋಮವಾರದಿಂದ ಆರಂಭಗೊಂಡಿದ್ದ ಆರು ಮಂದಿ ಸದಸ್ಯರನ್ನೊಳಗೊಂಡ ಭಾರತೀಯ ರಿಸರ್ವ್‌ ಬ್ಯಾಂಕ್‌ ನ ವಿತ್ತೀಯ ನೀತಿ ಸಮಿತಿಯ ಸಭೆಯಲ್ಲಿ 25 ಬೇಸಿಸ್‌ ಪಾಯಿಂಟ್ಸ್‌ ರೆಪೋ ದರವನ್ನು ಇಳಿಕೆ ಮಾಡುವ ನಿರ್ಧಾರ ಕೈಗೊಳ್ಳುವ ಮೂಲಕ ರೆಪೋ ದರ ಶೇ.6ಕ್ಕೆ ಇಳಿದಂತಾಗಿದೆ.

6.25ರಷ್ಟಿದ್ದ ರೆಪೋ ದರದಲ್ಲಿ ಶೇ.25 ಬೇಸಿಸ್‌ ಪಾಯಿಂಟ್ಸ್‌ ಇಳಿಕೆ ಮಾಡಲು ವಿತ್ತೀಯ ನೀತಿ ಸಮಿತಿ ಸಭೆಯಲ್ಲಿ ಒಮ್ಮತದ ನಿರ್ಧಾರ ತೆಗೆದುಕೊಂಡಿರುವುದಾಗಿ ಆರ್‌ ಬಿಐ ಗವರ್ನರ್‌ ಸಂಜಯ್‌ ಮಲ್ಹೋತ್ರಾ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಸಂಜಯ್‌ ಮಲ್ಹೋತ್ರಾ ಅವರು ಆರ್‌ ಬಿಐ ಗವರ್ನರ್‌ ಆಗಿ ಅಧಿಕಾರ ಸ್ವೀಕರಿಸಿದ ನಂತರ ನಡೆದ ಮೊದಲ ವಿತ್ತೀಯ ನೀತಿ ಸಮಿತಿ ಸಭೆಯಲ್ಲಿ ಶೇ.6.50ರ ರೆಪೋ ದರದಲ್ಲಿ ಶೇ.25 ಬೇಸಿಸ್‌ ಪಾಯಿಂಟ್ಸ್‌ ಇಳಿಕೆ ಮಾಡುವ ನಿರ್ಧಾರ ಕೈಗೊಂಡಿತ್ತು. 2020ರ ನಂತರ ಇದೇ ಮೊದಲ ಬಾರಿಗೆ ಆರ್‌ ಬಿಐ ರೆಪೋ ದರ ಇಳಿಕೆ ಮಾಡಿತ್ತು.

ರೆಪೋ ದರ ಇಳಿಕೆ ನಂತರ ಕೆನರಾ ಬ್ಯಾಂಕ್‌ , ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ ಸೇರಿದಂತೆ ಹಲವು ಬ್ಯಾಂಕ್‌ ಗಳು ಗೃಹಸಾಲಕ್ಕೆ ಸಂಬಂಧಿಸಿದಂತೆ ಬಡ್ಡಿದರ ಪರಿಷ್ಕರಿಸಿ ಕಡಿತಗೊಳಿಸಿತ್ತು. ಇದರಿಂದ ಗೃಹ ಸಾಲ ಪಡೆದಿರುವವರ ಮೇಲಿನ ಹೊರೆ ಸ್ವಲ್ಪ ಇಳಿದಂತಾಗಿತ್ತು. ಇದೀಗ ಶೇ.6ರ ಬಡ್ಡಿದರದಿಂದ ಗೃಹ ಸಾಲದ ಬಡ್ಡಿದರ ಇನ್ನಷ್ಟು ಇಳಿಯುವ ಮೂಲಕ ಗೃಹ ಮತ್ತು ವಾಹನ ಸಾಲಗಾರರು ನಿಟ್ಟುಸಿರು ಬಿಡುವಂತಾಗಿದೆ.

Actor Shivaraj kumar ನನ್ನ-ಸುದೀಪ್ ಮಧ್ಯೆ ಮನಸ್ತಾಪ ಇರಬಹುದು, ದ್ವೇಷವಿಲ್ಲ: ನಟ ಶಿವರಾಜ್ ಕುಮಾರ್

TAGGED:RBI: RBI repo cut for the second time - interest rates cut!
Share This Article
Facebook Twitter Copy Link Print
Previous Article Actor Shivaraj kumar ನನ್ನ-ಸುದೀಪ್ ಮಧ್ಯೆ ಮನಸ್ತಾಪ ಇರಬಹುದು, ದ್ವೇಷವಿಲ್ಲ: ನಟ ಶಿವರಾಜ್ ಕುಮಾರ್
Next Article Today’s prediction ಇಂದಿನ ರಾಶಿ ಭವಿಷ್ಯ, 09-04-2025, ಬುಧವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

Popular Posts

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read

You Might Also Like

ದೇಶಪ್ರಮುಖ

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read
ಕರ್ನಾಟಕಪ್ರಮುಖ

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read
ಕರ್ನಾಟಕದೇಶಪ್ರಮುಖ

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read
ಕರ್ನಾಟಕಪ್ರಮುಖ

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?