ಬೆಂಗಳೂರು: ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನಲ್ಲಿ (ಡಿಸಿಸಿ) ನಕಲಿ ಚಿನ್ನಾಭರಣ ಅಡವಿಟ್ಟು ₹62.77 ಕೋಟಿ ಸಾಲ ಪಡೆದಿದ್ದ ಪ್ರಕರಣದಲ್ಲಿ, ಬ್ಯಾಂಕ್‌ನ ಹಾಲಿ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ ಅವರನ್ನು ಜಾರಿ ಇ.ಡಿ ಬಂಧಿಸಿದೆ. ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯವು ಅವರನ್ನು 14 ದಿನಗಳವೆಗೆ ಇ.ಡಿ.ಬಂಧನಕ್ಕೆ ಒಪ್ಪಿಸಿದೆ.
ನಗರದ ಅಪೆಕ್ಸ್ ಬ್ಯಾಂಕ್‌ನ ಅತಿಥಿ ಗೃಹದಲ್ಲಿದ್ದ ಮಂಜುನಾಥಗೌಡರ ವಿಚಾರಣೆ ಮುಗಿಸಿದ ಬಳಿಕ, ಅವರನ್ನು ಶಾಂತಿನಗರದ ಇ.ಡಿ. ಕಚೇರಿಗೆ ಅಧಿಕಾರಿಗಳು ಕರೆದೊಯ್ದಿದ್ದರು.
ಇಂದು ಬೆಳಗ್ಗೆ ಮೆಡಿಕಲ್ ಟೆಸ್ಟ್ ನಂತರ 1ನೇ ಸಿಸಿಹೆಚ್ ಕೋರ್ಟ್‌ಗೆ ಹಾಜರುಪಡಿಸಿದರು. ಇಂಡಿ ಅಧಿಕಾರಿಗಳ ಮನವಿಯಂತೆ ನ್ಯಾಯಾಲಯ ಮಂಜುನಾಥ್ ಗೌಡರವರ ಹೆಚ್ಚುವರಿ ವಿಚಾರಣೆಗೆ ಅವರನ್ನು 14 ದಿನಗಳ ಕಾಲ ಇಡಿ ಅಧಿಕಾರಿಗಳ ಕಸ್ಟಡಿಗೆ ನೀಡಿ ಆದೇಶಿಸಿದೆ
ಪ್ರಕರಣದ ಹಿನ್ನೆಲೆ ಏನು?
ಶಿವಮೊಗ್ಗದ ಗಾಂಧಿಬಜಾರ್ ನಗರದಲ್ಲಿರುವ ಡಿಸಿಸಿ ಬ್ಯಾಂಕ್ ಶಾಖೆಯಲ್ಲಿ 11 ವರ್ಷಗಳ ಹಿಂದೆ ನಕಲಿ ಚಿನ್ನ ಅಡವಿಟ್ಟುಕೊಂಡು ಸಾಲ ಕೊಡಿಸಿದ ಹಗರಣ ನಡೆದಿತ್ತು. ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ತನಿಖೆ ನಡೆಸಿ ಪೊಲೀಸರು 2014ರ ಅ.18ರಂದು ಚಾರ್ಜ್‌ಶೀಟ್ ಸಲ್ಲಿಸಿದ್ದರು. ವಿಚಾರಣಾ ನ್ಯಾಯಾಲಯಕ್ಕೆ ಮೊದಲ ದೋಷಾರೋಪಪಟ್ಟಿ ಸಲ್ಲಿಸಿದ್ದರು.
ಈ ಹಿನ್ನೆಲೆಯಲ್ಲಿ ಬ್ಯಾಂಕ್ ಅಧ್ಯಕ್ಷ ಮಂಜುನಾಥ್ ಗೌಡಗೆ ಇಡಿ ಸಮನ್ಸ್ ಜಾರಿಗೊಳಿಸಿತ್ತು. ಕಳೆದ ವಾರವಷ್ಟೇ ಇ.ಡಿ ಸಮನ್ಸ್ ಪ್ರಶ್ನಿಸಿದ್ದ ಮಂಜುನಾಥ್ ಗೌಡ ಅವರ ಮೇಲನವಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು.
ಪ್ರಕರಣ ಬೆಳಕಿಗೆ ಬಂದ ನಂತರ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕರು ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಸೇರಿ 18 ಜನರ ವಿರುದ್ಧ ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ನಂತರ ಕೇಸ್ ಸಿಐಡಿಗೆ ವರ್ಗಾಯಿಸಲಾಗಿತ್ತು. ತನಿಖೆ ನಡೆಸಿದ ಸಿಐಡಿ, ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡರಿಗೆ ಕ್ಲೀನ್‌ಚಿಟ್ ನೀಡಿತ್ತು.
ಈ ಮಧ್ಯೆ ಸಹಕಾರ ಇಲಾಖೆ ಮಂಜುನಾಥಗೌಡರನ್ನು ನಿರ್ದೇಶಕ ಸ್ಥಾನದಿಂದ ವಜಾಗೊಳಿಸಿತ್ತು. ಎಂ.ಬಿ.ಚನ್ನವೀರಪ್ಪ ಬ್ಯಾಂಕ್ ಅಧ್ಯಕ್ಷರಾದ ನಂತರ ಬಂಗಾರ ಅಡಮಾನ ಸಾಲ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಲು ಕೋರಿ ಬ್ಯಾಂಕ್‌ನ ಆಡಳಿತ ಮಂಡಳಿ ಸರ್ಕಾರಕ್ಕೆ ಪತ್ರ ಬರೆದಿತ್ತು. ಸರ್ಕಾರದ ಆದೇಶದಂತೆ ಸಿಐಡಿ ಅಧಿಕಾರಿಗಳು ತನಿಖೆ ಆರಂಭಿಸಿದ್ದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರಿಸಿ ದಾಖಲಾತಿ, ಸಾಕ್ಷಿಗಳ ಹೇಳಿಕೆಗಳ ಆಧಾರ ಮೇಲೆ ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ ಹಾಗೂ ಪ್ರಧಾನ ವ್ಯವಸ್ಥಾಪಕ ನಾಗಭೂಷಣ್ ವಿರುದ್ಧದ ಆರೋಪಗಳು ಸಾಬೀತಾದ ಕಾರಣ ಇವರ ವಿರುದ್ಧ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾದ್ದು, ಇದೀಗ ಮಂಜುನಾಥ್ ಗೌಡ ಜಾರಿ ನಿರ್ದೇಶನಾಯಲದ ಅಧಿಕಾರಿಗಳ ವಶವಾಗಿದ್ದಾರೆ