newsics.com
ಬೆಂಗಳೂರು: ಮಾಜಿ ಸಚಿವ ಬಿ.ನಾಗೇಂದ್ರಗೆ ಶಿಕ್ಷೆ ಪ್ರಕಟಿಸಿ ಕೋರ್ಟ್ ಆದೇಶಿಸಿದೆ.
ಬರೋಬ್ಬರಿ 1 ಕೋಟಿ 25 ಲಕ್ಷ ರೂ. ದಂಡ ವಿಧಿಸಿದೆ. ಈ ಮೂಲಕ ಮಾಜಿ ಸಚಿವ ಬಿ.ನಾಗೇಂದ್ರಗೆ ಬಿಗ್ ಶಾಕ್ ನೀಡಿದೆ.
ಮಾಜಿ ಸಚಿವ ಬಿ ನಾಗೇಂದ್ರಗೆ ಚೆಕ್ ಬೌನ್ಸ್ ಪ್ರಕರಣದಲ್ಲಿ ಕೋರ್ಟ್ ಶಿಕ್ಷೆ ಪ್ರಮಾಣವನ್ನು ಪ್ರಕಟಿಸಿದೆ.
ದಂಡ ಪಾವತಿಸದೇ ಇದ್ದರೆ 1 ವರ್ಷ ಜೈಲು ವಾಸ ಅನುಭವಿಸುವಂತೆ 42ನೇ ಎಸಿಜೆಎಂ ಕೋರ್ಟ್ ನ್ಯಾಯಮೂರ್ತಿ ಶಿವಕುಮಾರ್ ಆದೇಶಿಸಿದ್ದಾರೆ.
ವಿಎಸ್ ಎಲ್ ಸ್ಟೀಲ್ ಲಿಮಿಟೆಡ್ ಮಾಜಿ ಸಚಿವ ಬಿ ನಾಗೇಂದ್ರ ಸೇರಿದಂತೆ ಮೂವರ ವಿರುದ್ಧ ಚೆಕ್ ಬೌನ್ಸ್ ಕೇಸ್ ದಾಖಲಿಸಿತ್ತು. ಈ ಪ್ರಕರಣದಲ್ಲಿ ಬುಧವಾರ ಕೋರ್ಟ್ ತೀರ್ಪು ನೀಡಿದೆ. ದಂಡವನ್ನು ಮೂವರೂ ಆರೋಪಿಗಳು ಪಾವತಿಸಬೇಕಿದೆ.