newsics.com
ಬೆಂಗಳೂರು: ಮಾಜಿ ಸಚಿವ ಬಿ ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾಗಿದೆ. ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಅವರು ನಾಗೇಂದ್ರ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದಾರೆ.
ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಭ್ರಷ್ಟಾಚಾರ ಪ್ರಕರಣದಲ್ಲಿ ಸಚಿವರಾಗಿದ್ದ ನಾಗೇಂದ್ರ ಅವರ ಹೆಸರು ಕೇಳಿಬಂದಿತ್ತು. ಹೀಗಾಗಿ ನಾಗೇಂದ್ರ ಅವರು 2024ರ ಜೂನ್ 6ರಂದು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ಇಡಿ ಅಧಿಕಾರಿಗಳು ನಾಗೇಂದ್ರ ಅವರನ್ಜು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಿದ್ದರು. ನಂತರ ನಾಗೇಂದ್ರ ಜಾಮೀನಿನ ಮೇಲೆ ಜೈಲಿನಿಂದ ಆಚೆ ಬಂದಿದ್ದು,ಮತ್ತೆ ಸಚಿವರಾಗಲು ಉತ್ಸುಕರಾಗಿದ್ದರು. ಆದರೆ ಕರ್ನಾಟಕ ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗೇಂದ್ರ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡುವಂತೆ ಇಡಿ ಮನವಿ ಮಾಡಿತ್ತು. ಅದರಂತೆ ಇಂದು (ಏಪ್ರಿಲ್ 09) ರಾಜ್ಯಪಾಲರು ನಾಗೇಂದ್ರ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದಾರೆ.
https://www.newsics.com/2025/04/09/maxwells-penalty-was-a-blow/