newsics.com
ನೆಲಮಂಗಲ: ರಾಜ್ಯದಲ್ಲಿ ಮೊದಲ ಬಾರಿಗೆ ಹೈಬ್ರಿಡ್ ತಳಿಯ ಕಾಡು ಬೆಕ್ಕು ಪತ್ತೆಯಾಗಿದೆ.
ತಾಲೂಕಿನ ಸೋಂಪುರ ಹೋಬಳಿ ಮರಳಕುಂಟೆ ಗ್ರಾಮದ ಹಂಚಕಲ್ಲುಗುಟ್ಟೆ ಒಳಗೊಂಡಂತೆ ಇರುವ ರೈತರ ಜಮೀನಿನಲ್ಲಿ ಈ ಬೆಕ್ಕು ಪತ್ತೆಯಾಗಿದೆ ಎಂದು ಜೀವವೈವಿಧ್ಯ ಸಂಶೋಧಕ ತಂಡದ ಮಂಜುನಾಥ ಎಸ್.ನಾಯಕ, ಎಸ್.ಸುನೀಲ್ಕುಮಾರ್, ಸಿ.ರಘುಕುಮಾರ್, ಸಿ.ಕುಲದೀಪ್ ತಿಳಿಸಿದ್ದಾರೆ.
ಅಳಿವಿನ ಅಂಚಿನಲ್ಲಿ ಇರುವ ವಿವಿಧ ಕಾಡು ಬೆಕ್ಕು ತಳಿಗಳ ಪೈಕಿ ಇದು ಸಹ ಒಂದಾಗಿದೆ. ಕಾಡು ಬೆಕ್ಕುಗಳು ವಿಶಿಷ್ಟ ನಡವಳಿಕೆಯ ಗುಣಲಕ್ಷಣಗಳನ್ನು ಪ್ರದರ್ಶಿಸುತ್ತವೆ. ಇವು ಸಂಪೂರ್ಣ ನಿಶಾಚರಿಗಳಾಗಿದ್ದು, ರಾತ್ರಿ ಸಮಯದಲ್ಲಿ ಸಕ್ರಿಯವಾಗಿರುತ್ತವೆ. ಇವುಗಳು ಏಕಾಂತವನ್ನು ಬಯಸುತ್ತವೆ ಮತ್ತು ಸಾಮಾನ್ಯವಾಗಿ ಮಾನವರಿಗೆ ಗೊಚರಿಸುವುದು ತೀರಾ ವಿರಳ ಎಂದು ಈ ಕುರಿತು ತಂಡದ ಸದಸ್ಯರು ಮಾಹಿತಿ ನೀಡಿದ್ದಾರೆ.
ಮರಳಕುಂಟೆ ಸುತ್ತಮುತ್ತ ನರಿ, ಜಿಂಕೆ, ಹಲವಾರು ಜಾತಿಯ ಪಕ್ಷಿಗಳು ಇಲ್ಲಿ ವಾಸ ಇವೆ. ಕಾಡು ಬೆಕ್ಕುಗಳಿಗೆ ಸೂಕ್ತ ವಾಸ ಸ್ಥಾನವಾಗಿರುವ ಹಂಚಕಲ್ಲುಗುಟ್ಟೆ ಪ್ರದೇಶದಲ್ಲಿ ರಾಜ್ಯ ಸರ್ಕಾರ ಗಣಿಗಾರಿಕೆಗೆ ಅನುಮತಿ ಕೊಟ್ಟಿರುವುದು ವಿಪರ್ಯಾಸ ಎಂದಿದ್ದಾರೆ.
https://www.newsics.com/2025/04/10/center-launches-new-aadhaar-app/