newsics.com
ನೆಲಮಂಗಲ: ನಾಮಕರಣ ಕಾರ್ಯಕ್ರಮಕ್ಕೆ ತೆರಳುತ್ತಿದ್ದಾಗ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ನೆಲಮಂಗಲ ತಾಲೂಕಿನ ಡಾಬಸ್ ಪೇಟೆ ಬಳಿಯ ಅಂಚೆಮನೆ ಕ್ರಾಸ್ ಬಳಿ ನಡೆದಿದೆ.
ಮೃತರನ್ನು ಬೆಂಗಳೂರಿನ ಮಲ್ಲೇಶ್ವರಂ ಮೂಲದ ಒಂದೇ ಕುಟುಂಬದ ಮೂವರಾದ ತಾಯಿ ಶಶಿಕಲಾ (55), ಮಗಳು ದೀಪಿಕಾ (35) ಹಾಗೂ ತಂದೆ ಗೋಪಾಲ್ (60) ಎಂದು ಗುರುತಿಸಲಾಗಿದೆ.
ಕಾರಿನಲ್ಲಿ ಐವರು ಬೆಂಗಳೂರು ಮಾರ್ಗವಾಗಿ ತುಮಕೂರಿನಲ್ಲಿ ಈ ವೇಳೆ ಡಾಬಸ್ ಪೇಟೆ ಬಳಿ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮೂವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆ ಪೈಕಿ ಚಿಕಿತ್ಸೆ ಫಲಕಾರಿಯಾಗದೇ ಗೋಪಾಲ್ ಎಂಬುವವರು ಸಾವನ್ನಪ್ಪಿದ್ದಾರೆ.
https://www.newsics.com/2025/04/10/lovers-lock-lips-while-riding-a-bike/