ನವದೆಹಲಿ: ಜುಲೈ ಮೊದಲ ದಿನವೇ ತೈಲ ಮಾರುಕಟ್ಟೆ ಕಂಪನಿಯಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್ ದೇಶದ ಜನತೆಗೆ ಸಿಹಿ ಸುದ್ದಿ ನೀಡಿದೆ. ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯನ್ನು ಇಳಿಸಿದೆ. ಯಾವ್ಯಾವ ನಗರದಲ್ಲಿ ಸಿಲಿಂಡರ್ ದರ ಎಷ್ಟಿದೆ? ಇಲ್ಲಿದೆ ಮಾಹಿತಿ.
ಜುಲೈ ತಿಂಗಳ ಆರಂಭದಲ್ಲೇ ಇಂಡಿಯನ್ ಆಯಿಲ್ ಕಾರ್ಪೊರೇಷನ್ 19 ಕೆಜಿಯ ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ 31ರೂ. ಇಳಿಕೆ ಮಾಡಿದೆ. ಹೊಸ ಬೆಲೆ ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ. ಆದರೆ, ಗೃಹ ಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಯಾವುದೆ ಬದಲಾವಣೆಯಾಗಿಲ್ಲ.
ದರ ಇಳಿಕೆಯಿಂದ ದೆಹಲಿಯಲ್ಲಿ ಮೊದಲು 1,676 ರೂ.ಗೆ ಮಾರಾಟವಾಗುತ್ತಿದ್ದ 19 ಕೆಜಿ ಸಿಲಿಂಡರ್ ಈಗ 1,646 ರೂ.ಗೆ ಮಾರಾಟವಾಗುತ್ತಿದೆ. ಮುಂಬೈನಲ್ಲಿ 19 ಕೆಜಿ ಸಿಲಿಂಡರ್ ಬೆಲೆ 1,598 ರೂ., ಕೋಲ್ಕತ್ತಾದಲ್ಲಿ 1,756 ರೂ. ಇದೆ.
ಗೃಹ ಬಳಕೆಯಲ್ಲಿ ಬಳಸುವ ಬಳಸುವ 14.2 ಕೆಜಿ ಎಲ್‌ಪಿಜಿ (LPG) ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಬೆಂಗಳೂರಿನಲ್ಲಿ 14.2 ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆ 905.50 ರೂ.ದರವಿದೆ.
ದೆಹಲಿಯಲ್ಲಿ 803 ರೂ. ಕೋಲ್ಕತ್ತಾದಲ್ಲಿ 829 ರೂ. ಚೆನ್ನೈನಲ್ಲಿ 818.50 ರೂ. ಮತ್ತು ಮುಂಬೈನಲ್ಲಿ 802.50 ರೂ. ಇದೆ.