newsics.com
ವಾರಣಾಸಿ: ವಾರಣಾಸಿಯಲ್ಲಿ 3,880 ಕೋಟಿ ರೂ.ಗಳ 44 ಯೋಜನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು.
130 ಕುಡಿಯುವ ನೀರಿನ ಯೋಜನೆಗಳು, 100 ಹೊಸ ಅಂಗನವಾಡಿ ಕೇಂದ್ರಗಳು, 356 ಗ್ರಂಥಾಲಯಗಳು, ಪಿಂದ್ರಾದಲ್ಲಿ ಪಾಲಿಟೆಕ್ನಿಕ್ ಕಾಲೇಜು ಮತ್ತು ಸರ್ಕಾರಿ ಪದವಿ ಕಾಲೇಜು ಸೇರಿದಂತೆ ಗ್ರಾಮೀಣಾಭಿವೃದ್ಧಿಗೆ ಸಂಬಂಧಿಸಿದ ಯೋಜನೆಗಳನ್ನು ಉದ್ಘಾಟಿಸಲಾಯಿತು ಎಂದು ವಾರಣಾಸಿ ವಿಭಾಗೀಯ ಆಯುಕ್ತ ಕೌಶಲ್ ರಾಜ್ ಶರ್ಮಾ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ರಾಜ್ಯಪಾಲ ಆನಂದಿಬೆನ್ ಪಟೇಲ್ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಉಪಸ್ಥಿತರಿದ್ದರು.
https://www.newsics.com/2025/04/11/wow-gold-prices-are-rising-again-2/