newsics.com
ಕೋಲ್ಕತ್ತಾ: ವಕ್ಫ್ (ತಿದ್ದುಪಡಿ) ಕಾಯ್ದೆಯ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳಿಗೆ ಸಂಬಂಧಿಸಿದ ಹಿಂಸಾತ್ಮಕ ಘರ್ಷಣೆಗಳಲ್ಲಿ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಮೂವರು ಮೃತಪಟ್ಟಿದ್ದಾರೆ.
ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ತಮ್ಮ ರಾಜ್ಯವು ವಕ್ಫ್ (ತಿದ್ದುಪಡಿ) ಕಾಯ್ದೆಯನ್ನು ಜಾರಿಗೆ ತರುವುದಿಲ್ಲ ಎಂದು ಘೋಷಿಸಿದ್ದಾರೆ.
ಹೊಸ ಶಾಸನವನ್ನು ವಿರೋಧಿಸಿ ಶುಕ್ರವಾರ ಮಾಲ್ಡಾ, ಮುರ್ಷಿದಾಬಾದ್, ದಕ್ಷಿಣ 24 ಪರಗಣ ಮತ್ತು ಹೂಗ್ಲಿ ಜಿಲ್ಲೆಗಳಲ್ಲಿ ನಡೆಯುತ್ತಿದ್ದ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿತ್ತು. ಪೊಲೀಸ್ ವ್ಯಾನ್‌ಗಳು ಸೇರಿದಂತೆ ಬಹುಸಂಖ್ಯಾತ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಶುಕ್ರವಾರ ಭುಗಿಲೆದ್ದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ 118 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.