newsics.com
ನವದೆಹಲಿ: ಟೋಕಿಯೊ ಒಲಿಂಪಿಕ್ ಕ್ರೀಡಾಕೂಟದ ಬೆಳ್ಳಿ ಪದಕ ವಿಜೇತೆ ಮೀರಾಬಾಯಿ ಚಾನು ಅವರನ್ನು ಮಂಗಳವಾರ ಭಾರತೀಯ ವೇಟ್ಲಿಫ್ಟಿಂಗ್ ಫೆಡರೇಶನ್ನ ಅಥ್ಲೀಟ್ಗಳ ಆಯೋಗದ ಅಧ್ಯಕ್ಷೆಯಾಗಿ ಆಯ್ಕೆ ಮಾಡಲಾಗಿದೆ.
ಫೆಡರೇಶನ್ನ ಅಥ್ಲೀಟ್ಗಳ ಆಯೋಗದ ಅಧ್ಯಕ್ಷರಾಗಿ ನನ್ನನ್ನು ಆಯ್ಕೆ ಮಾಡಿದ ಭಾರತೀಯ ವೇಟ್ಲಿಫ್ಟಿಂಗ್ ಫೆಡರೇಶನ್ಗೆ ನನ್ನ ಅಪಾರ ಕೃತಜ್ಞತೆಯನ್ನು ಅರ್ಪಿಸುತ್ತೇನೆ. ಸಹ ವೇಟ್ ಲಿಫ್ಟರ್ ಗಳ ಧ್ವನಿಯನ್ನು ಪ್ರತಿನಿಧಿಸುವ ಮತ್ತು ಎತ್ತಿಹಿಡಿಯುವ ಅವಕಾಶವು ನನಗೆ ಬಹಳ ಹೆಮ್ಮೆಯ ವಿಷಯವಾಗಿದೆ ಎಂದು ಟೋಕಿಯೊ ಪದಕ ವಿಜೇತೆ ಮೀರಾಬಾಯಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
https://www.newsics.com/2025/04/15/this-is-why-some-people-dont-sleep-well-at-night/