newsics.com
ಮಚ್ಚು ಹಿಡಿದು ರೀಲ್ಸ್ ಮಾಡಿದ್ದ ಪ್ರಕರಣದಲ್ಲಿ ರಜತ್‌ಗೆ 14 ದಿನ ನ್ಯಾಯಾಂಗ ಬಂಧನಕ್ಕೆ 24ನೇ ಎಸಿಎಂಎಂ ಕೋರ್ಟ್ ಆದೇಶ ನೀಡಿದ್ದಾರೆ. ಇನ್ನೂ ವಿನಯ್‌ಗೆ 500 ರೂ. ದಂಡ ವಿಧಿಸುವ ಮೂಲಕ ರಿಲೀಫ್ ಕೊಟ್ಟಿದೆ.
ರೀಲ್ಸ್ ಕೇಸ್‌ನಲ್ಲಿ ಈಗಾಗಲೇ ರಜತ್ ಅವರು ಒಮ್ಮೆ ಅರೆಸ್ಟ್ ಆಗಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದರು. ನಂತರ ಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿತ್ತು. ಜಾಮೀನಿನ ಷರತ್ತಿನಲ್ಲಿ ನ್ಯಾಯಾಲಯ ಪ್ರತಿ ವಿಚಾರಣೆಗೆ ಹಾಜರಾಗುವಂತೆ ಷರತ್ತು ವಿಧಿಸಿತ್ತು. ಆದ್ರೆ ರಜತ್ ಅವರು ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಆರೋಪಿ ರಜತ್ ವಿರುದ್ಧ ವಾರೆಂಟ್ ಹೊರಡಿಸಿತ್ತು.
ವಿಚಾರಣೆಗೆ ಹಾಜರಾಗದ ರಜತ್‌ನನ್ನು ಬಸವೇಶ್ವರನಗರ ಪೊಲೀಸರು ಬಂಧಿಸಿ ಇಂದು ಕೋರ್ಟ್ ಹಾಜರುಪಡಿಸಿದ್ದರು.
ಈ ರೀಲ್ಸ್ ಪ್ರಕರಣದಲ್ಲಿ ಆರೋಪಿ ವಿನಯ್ ಗೌಡ ಅವರಿಗೆ ಇಂದು ರಿಲೀಫ್ ಸಿಕ್ಕಿದೆ. ರಜತ್‌ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಮತ್ತೊಮ್ಮೆ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗುತ್ತಿದೆ.