newsics.com
ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್ ಅವರ ಪತ್ನಿ ಬಾಲಿವುಡ್ ನಟಿ ಅಥಿಯಾ ಶೆಟ್ಟಿ ಇತ್ತೀಚೆಗಷ್ಟೆ ಮುದ್ದಾದ ಮಗುವಿಗೆ ಜನ್ಮ ನೀಡಿದ್ದರು. ಮಾರ್ಚ್ 24 ರಂದು, ಅಥಿಯಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಈ ಬಗ್ಗೆ ದಂಪತಿಗಳು ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದರು.
ಇದೀಗ ಕೆಎಲ್ ರಾಹುಲ್ ಮತ್ತು ಅಥಿಯಾ ಶೆಟ್ಟಿ ಮತ್ತೊಂದು ಪೋಸ್ಟ್ ಹಂಚಿಕೊಳ್ಳುವ ಮೂಲಕ ತಮ್ಮ ಮಗಳ ಹೆಸರನ್ನು ಬಹಿರಂಗಪಡಿಸಿದ್ದಾರೆ.
ಕೆಎಲ್ ರಾಹುಲ್ ಪ್ರಸ್ತುತ ಐಪಿಎಲ್‌ನಲ್ಲಿ ಬ್ಯುಸಿಯಾಗಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ಪರ ಆಡುತ್ತಿರುವ ರಾಹುಲ್ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ಏತನ್ಮಧ್ಯೆ, ಅವರು ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಒಂದು ಪೋಸ್ಟ್ ಹಂಚಿಕೊಂಡಿದ್ದಾರೆ. ಈ ಪೋಸ್ಟ್ನಲ್ಲಿ ಅವರು ಅಥಿಯಾ ಶೆಟ್ಟಿ ಮತ್ತು ಅವರ ಮಗಳೊಂದಿಗಿನ ಫೋಟೋವನ್ನು ಹಂಚಿಕೊಂಡಿದ್ದಾರೆ. ಇದರೊಂದಿಗೆ, ಅವರು ಶೀರ್ಷಿಕೆಯಲ್ಲಿ ತಮ್ಮ ಮಗಳ ಹೆಸರನ್ನು ಉಲ್ಲೇಖಿಸಿದ್ದು, ‘ನಮ್ಮ ಮಗಳು, ನಮ್ಮ ಸರ್ವಸ್ವ. ಇವಾರಾ- ದೇವರ ಕೊಡುಗೆ. ಇವಾರಾ ಎಂಬುದು ಸಂಸ್ಕೃತ ಪದವಾಗಿದ್ದು, ಇದರ ಅರ್ಥ ದೇವರ ಕೊಡುಗೆ ಎಂದು ಬರೆದುಕೊಂಡಿದ್ದಾರೆ.
https://www.instagram.com/p/DIlMd2UTkhP/?igsh=MTZ2dTl0ZWtiaDQ1eA==
Nail Loss ಕೂದಲು ಉದುರುತ್ತಿದ್ದ ಜನರಿಗೆ ಈಗ ಉಗುರು ಉದುರುವ ಸಮಸ್ಯೆ: ಏನಾಗ್ತಿದೆ ಈ ಗ್ರಾಮಗಳಲ್ಲಿ?