Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Fake Currency Notes ದಾಂಡೇಲಿಯಲ್ಲಿ ₹12 ಕೋಟಿ ಮೌಲ್ಯದ ನಕಲಿ ನೋಟು ಪತ್ತೆ!  
ಕರ್ನಾಟಕಪ್ರಮುಖ

Fake Currency Notes ದಾಂಡೇಲಿಯಲ್ಲಿ ₹12 ಕೋಟಿ ಮೌಲ್ಯದ ನಕಲಿ ನೋಟು ಪತ್ತೆ!  

Share
2 Min Read
SHARE

newsics.com

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ಗಾಂಧಿನಗರ ಬಡಾವಣೆಯ ಮನೆ ಒಂದರಲ್ಲಿ ಕಂತೆ ಕಂತೆ ನಕಲಿ ಕರೆನ್ಸಿ ನೋಟುಗಳು ಪತ್ತೆಯಾದ ಪ್ರಕರಣ ಸಂಬಂಧ ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಕೊನೆಗೂ ಪೊಲೀಸರು ಯಶಸ್ವಿಯಾಗಿದ್ದಾರೆ. ಗೋವಾ, ಹೈದರಾಬಾದ್ ಎಂದು ಪೊಲೀಸರನ್ನು ಯಾಮಾರಿಸಿದ್ದ ಆರೋಪಿ ಅರ್ಷದ್ ಅಂಜುಂ ಖಾನ್‌ನನ್ನು ಉತ್ತರ ಪ್ರದೇಶದ ಲಖನೌನಲ್ಲಿ ಬಂಧಿಸಲಾಗಿದೆ. ಸದ್ಯ ಆರೋಪಿಯನ್ನು ಬಂಧಿಸಿ ಉತ್ತರ ಕನ್ನಡಕ್ಕೆ ಕರೆತಂದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಮನೆಯಲ್ಲಿ ನಕಲಿ ನೋಟುಗಳ ಪತ್ತೆಯಾದ 10 ದಿನಗಳ ಬಳಿಕ ಆರೋಪಿ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಆರಂಭದಲ್ಲಿ, ನಕಲಿ ನೋಟಿನ ಕಂತೆಗಳ ಮೇಲೆ, ‘ಮೂವಿ ಪರ್ಪಸ್ ಓನ್ಲಿ’ ಎಂದು ಬರೆದಿದ್ದರಿಂದ ಪೊಲೀಸರು ಸುಮ್ಮನಾಗಿದ್ದರು. ಆದರೆ ಆರೋಪಿ ಹೈದರಾಬಾದ್‌ನಲ್ಲಿದ್ದೇನೆ, ಗೋವಾದಲ್ಲಿದ್ದೇನೆ ಎಂದು ಯಾಮಾರಿಸಿದ್ದರಿಂದ ಅನುಮಾನ ಹೆಚ್ಚಾಗಿತ್ತು.

ನಂತರ ಆರೋಪಿಯ ಮೊಬೈಲ್ ಟವರ್ ಲೊಕೇಶನ್ ಹಾಗೂ ತಾಂತ್ರಿಕ ಸಹಾಯದ ಮೂಲಕ ಆತನನ್ನು ಪೊಲೀಸರು ಯಶಸ್ವಿಯಾಗಿದ್ದಾರೆ.

ಆರೋಪಿಯನ್ನು ಸದ್ಯ ದಾಂಡೇಲಿ ನ್ಯಾಯಾಲಯಕ್ಕೆ ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ನೀಡುವಂತೆ ಪೊಲೀಸರು ಮನವಿ ಮಾಡಿದ್ದು, ಇದಕ್ಕೆ ನ್ಯಾಯಾಲಯ ಸಮ್ಮತಿ ಸೂಚಿಸಿದೆ. ಸದ್ಯ ಪೊಲೀಸ್ ಕಸ್ಟಡಿಯಲ್ಲಿರುವ ಆರೋಪಿಯ ವಿಚಾರಣೆ ತೀವ್ರಗೊಳಿಸಲಾಗಿದ್ದು, ನಕಲಿ ನೋಟಿನ ಹಿಂದಿನ ಅಸಲಿ ಕಾರಣ ತಿಳಿಯಬೇಕಿದೆ.

ಪ್ರಕರಣದ ಹಿನ್ನೆಲೆ

ಗಾಂಧಿನಗರದ ನೂರಜಾನ್ ಜುಂಜುವಾಡ್ಕರ ಎಂಬವವರ ಮನೆಯಲ್ಲಿ ಅರ್ಷದ್ ಬಾಡಿಗೆಗೆ ವಾಸವಾಗಿದ್ದ. ಕಳೆದ ಒಂದು ತಿಂಗಳಿನಿಂದ ಈತ ಆ ಮನೆಯಲ್ಲಿ ಇಲ್ಲದೇ ಇರುವುದನ್ನು ಗಮನಿಸಿ ಮತ್ತು ಆ ಮನೆಯ ಹಿಂಬದಿಯ ಬಾಗಿಲ ಚಿಲಕ ಸರಿ ಹಾಕದೇ ಇರುವುದನ್ನು ತಿಳಿದು, ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದರು. ದಾಂಡೇಲಿ ನಗರ ಠಾಣೆಯ ಪೊಲೀಸರು ಮನೆಗೆ ಬಂದು ಬಾಗಿಲು ತೆರೆಯುತ್ತಿದ್ದಂತೆಯೇ, 500 ರೂ. ಮುಖ ಬೆಲೆಯ ಕಂತೆ ಕಂತೆ ನೋಟುಗಳು ಕಾಣಿಸಿದ್ದವು.

ಸುಮಾರು 12 ಕೋಟಿ ರೂಪಾಯಿಗೂ ಹೆಚ್ಚು ಮುಖಬೆಲೆಯ ನಕಲಿ ನೋಟುಗಳು ಕಾಣಿಸಿದ್ದವು. ಅವುಗಳ ಬಂಡಲ್ ಮೇಲೆ ‘ಮೂವಿ ಪರ್ಪಸ್ ಓನ್ಲಿ’ ಎಂದು ಬರೆದಿತ್ತು. ನಂತರ ಅರ್ಷದ್ಗೆ ಕರೆ ಮಾಡಿ ಪೊಲೀಸರು ವಿಚಾರಿಸಿದ್ದರು. ಆಗ ಆತ, ಗೋವಾದಲ್ಲಿ ಇದ್ದು ಬರುವುದಾಗಿ ಮಾಹಿತಿ ನೀಡಿದ್ದ. ಆದರೆ, ಆತ ಯಾಮಾರಿಸುತ್ತಿದ್ದಾನೆ ಎಂಬುದು ಅರಿವಾದ ಕೂಡಲೇ ಪೊಲೀಸರು ಮೊಬೈಲ್ ಟವರ್ ಲೊಕೇಶನ್ ಟ್ರೇಸ್ ಮಾಡಿದ್ದಾರೆ. ಆಗ ಆರೋಪಿ ಲಖನೌನಲ್ಲಿರುವುದು ಗೊತ್ತಾಗಿದ್ದು, ಬಂಧನಕ್ಕೆ ಕ್ರಮ ಕೈಗೊಂಡಿದ್ದಾರೆ.

ರೋಹಿತ್ ವೇಮುಲಾ ಕಾಯಿದೆ ಜಾರಿಗೊಳಿಸುವಂತೆ ಸಿದ್ದರಾಮಯ್ಯಗೆ ರಾಹುಲ್ ಗಾಂಧಿ ಪತ್ರ

TAGGED:Fake Currency Notes ₹12 crore fake notes found in Dandeli!
Share This Article
Facebook Twitter Copy Link Print
Previous Article ರೋಹಿತ್ ವೇಮುಲಾ ಕಾಯಿದೆ ಜಾರಿಗೊಳಿಸುವಂತೆ ಸಿದ್ದರಾಮಯ್ಯಗೆ ರಾಹುಲ್ ಗಾಂಧಿ ಪತ್ರ
Next Article WOODEN TEMPLE ಇದು ಮರದ ದೇಗುಲ!

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Social Networks

Facebook-f Instagram Twitter
Welcome Back!

Sign in to your account

Lost your password?