Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > BIG NEWS : 10 ವರ್ಷ ಕೆಲಸ ಮಾಡಿದ ಉದ್ಯೋಗಿ ಖಾಯಂಗೆ ಅರ್ಹ – ಹೈಕೋರ್ಟ್ ತೀರ್ಪು
ಕರ್ನಾಟಕ

BIG NEWS : 10 ವರ್ಷ ಕೆಲಸ ಮಾಡಿದ ಉದ್ಯೋಗಿ ಖಾಯಂಗೆ ಅರ್ಹ – ಹೈಕೋರ್ಟ್ ತೀರ್ಪು

Share
1 Min Read
SHARE

newsics.com

ಬೆಂಗಳೂರು : 10 ವರ್ಷ ನಿರಂತರವಾಗಿ ಕೆಲಸ ಮಾಡಿದ ಉದ್ಯೋಗಿ ಖಾಯಂಗೆ ಅರ್ಹ ಎಂದು ಹೈಕೋರ್ಟ್ ಮಹತ್ವದ ತೀರ್ಪುನೀಡಿದೆ.

ದಿನಗೂಲಿ ಆಧಾರದಲ್ಲಿ ಸತತ 30 ವರ್ಷ ಅರಣ್ಯ ವೀಕ್ಷಕ/ಚಾಲಕ ಉದ್ಯೋಗದಲ್ಲಿ ಕಾರ್ಯನಿರ್ವಹಿಸಿದ ದಿನಗೂಲಿ ನೌಕರನ ಸೇವೆ ಕಾಯಂಗೊಳಿಸಲು ರಾಜ್ಯ ಸರ್ಕಾರ ಮತ್ತು ಅರಣ್ಯ ಇಲಾಖೆಗೆ ಹೈಕೋರ್ಟ್ ಆದೇಶಿಸಿದೆ. ಮಂಜೂರಾತಿ ಹುದ್ದೆಯಲ್ಲಿ 10 ವರ್ಷ ನಿರಂತರವಾಗಿ ಕೆಲಸ ಮಾಡಿದ ಉದ್ಯೋಗಿ ಸೇವೆ ಕಾಯಂಗೆ ಅರ್ಹನಾಗುತ್ತಾನೆ ಎಂದು ಸ್ಪಷ್ಟಪಡಿಸಿದೆ.

ತಮ್ಮ ಸೇವೆ ಕಾಯಂಗೊಳಿಸಲು ನಿರಾಕರಿಸಿ ಅರಣ್ಯ ಇಲಾಖೆ ನೀಡಿದ್ದ ಹಿಂಬರಹ ಮತ್ತು ಹಿಂಬರಹ ಪುರಸ್ಕರಿಸಿದ ಕರ್ನಾಟಕ ಆಡಳಿತಾತ್ಮಕ ನ್ಯಾಯಾಧೀಕರಣದ (ಕೆಎಟಿ) ಆದೇಶ ರದ್ದುಪಡಿಸುವಂತೆ ಕೋರಿ ಆನೇಕಲ್‌ ವಲಯದಲ್ಲಿ ಅರಣ್ಯ ವೀಕ್ಷಕ (ಫಾರೆಸ್ಟ್‌ ವಾಚರ್‌) ಪಿ.ಜುಂಜಪ್ಪ (53) ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್‌.ದೀಕ್ಷಿತ್‌ ಮತ್ತು ನ್ಯಾಯಮೂರ್ತಿ ರಾಮಚಂದ್ರ ಡಿ.ಹುದ್ದಾರ್‌ ಅವರ ಪೀಠ ಈ ಆದೇಶ ಮಾಡಿದೆ

ಅರ್ಜಿದಾರರ ಪರ ವಕೀಲರು, ಜುಂಜಪ್ಪ ಕಾಯಂ ನೌಕರರಂತೆ 30 ವರ್ಷ ಅರಣ್ಯ ಇಲಾಖೆಯಲ್ಲಿ ಕೆಲಸ ನಿರ್ವಹಿಸಿದ್ದಾರೆ. ಸೇವೆ ಕಾಯಮಾತಿ ವಿಚಾರದಲ್ಲಿ ರಾಜ್ಯ ಸರ್ಕಾರ ಹೊರಡಿಸಿರುವ ಹಲವು ಆದೇಶದಲ್ಲಿ ನಿಗದಿಪಡಿಸಿದ ಮಾನದಂಡಗಳನ್ನು ಜುಂಜಪ್ಪ ಪೂರೈಸುತ್ತಾರೆ. ಅವರ ಸೇವೆ ಕಾಯಂಗೊಳಿಸಲು ನಿರಾಕರಿಸುವುದು ಸಂವಿಧಾನದ ಪರಿಚ್ಛೇದ 14 ಮತ್ತು 16ರ ಉಲ್ಲಂಘನೆಯಾಗಿದೆ. ಮಂಜೂರಾದ ಹುದ್ದೆಗಳಲ್ಲಿ 10 ವರ್ಷ ನಿರಂತರವಾಗಿ ಸೇವೆ ಸಲ್ಲಿಸಿದವರ ಸೇವೆ ಕಾಯಂಗೊಳಿಸಬೇಕು ಎಂದು ಈಗಾಗಲೇ ಹೈಕೋರ್ಟ್‌ ಧಾರವಾಡ ನ್ಯಾಯಾಲಯವು ಆದೇಶಿಸಿದೆ ಎಂದು ವಿವರಿಸಿದ್ದರು.

TAGGED:#employee #worked #permanent #employment #HighCourt #ruling
Share This Article
Facebook Twitter Copy Link Print
Previous Article Viral Video ಇದೆಂಥಾ ಅವಸ್ಥೆ – ವಿದ್ಯಾರ್ಥಿಗಳಿಗೆ ಮದ್ಯ ನೀಡುತ್ತಿದ್ದ ಶಿಕ್ಷಕ ಸಸ್ಪೆಂಡ್
Next Article Monkey fox ಮಂಗನ ಕಾಯಿಲೆಗೆ ಬಾಲಕ ಬಲಿ ಕೇಸ್: ಆರೋಗ್ಯ ಇಲಾಖೆಗೆ ವರದಿ ನೀಡಲು ಸೂಚನೆ

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಕರ್ನಾಟಕ

Prajwal Revanna : ಚೆನ್ನಮ್ಮ ಅವರ ಅಂತ್ಯಕ್ರಿಯೆ: ಜೈಲಿನಿಂದಲೇ ಅಜ್ಜಿಗೆ ಅಂತಿಮ ನಮನ ಸಲ್ಲಿಸಿದ ಪ್ರಜ್ವಲ್ ರೇವಣ್ಣ

2 Min Read
ಕರ್ನಾಟಕಪ್ರಮುಖ

Today Weather Report ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ: ಕರಾವಳಿಯಲ್ಲಿ ಭಾರಿ ಮಳೆ, ಒಳನಾಡಿನಲ್ಲಿ ಬಿರುಗಾಳಿ ಎಚ್ಚರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?