newsics.com
ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ಚರ್ಚೆ ನಡೆಯುತ್ತಿದೆ. ಸಿದ್ದರಾಮಯ್ಯ ಬಣ ಹಾಗೂ ಡಿ ಕೆ ಶಿವಕುಮಾರ್ ಬಣದ ನಡುವೆ ಸಿಎಂ ಸ್ಥಾನದ ಜಟಾಪಟಿ ಜೋರಾಗಿದ್ದು, ಈ ನಡುವೆ ದಲಿತ ಮುಖ್ಯಮಂತ್ರಿ ವಿಚಾರ ಮತ್ತೆ ಮುನ್ನಲೇಗೆ ಬಂದಿದೆ. ಈ ಬಗ್ಗೆ ಆಹಾರ ಸಚಿವರಾದ ಕೆ ಹೆಚ್ ಮುನಿಯಪ್ಪ ಅವರು ಪ್ರತಿಕ್ರಿಯಿಸಿದ್ದಾರೆ.
ಬೆಂಗಳೂರಿನ ದೇವನಹಳ್ಳಿಯಲ್ಲಿ ಪ್ರತಿಕ್ರಿಯೆ ನೀಡಿದ ಸಚಿವ ಕೆಹೆಚ್ ಮುನಿಯಪ್ಪ, ಯಾವುತ್ತು ಎಲ್ಲಾ ಸಮುದಾಯಗಳಿಗೂ ಸಮಾನ ಪ್ರಾತಿನಿತ್ಯ ಕೊಡುವುದು ಕಾಂಗ್ರೆಸ್ ಸರ್ಕಾರ ಮಾತ್ರ. ನಾನೇ ಹೈಕಮಾಂಡ್‌ಗೆ ಹೇಳಿದ್ದೀನಿ ಧರ್ಮಸಿಂಗ್ ಆದ ನಂತರ ಸಾಕಷ್ಟು ಜನ ಹಿರಿಯರು ಪಕ್ಷದಲ್ಲಿ ಇದ್ದಾರೆ. ಮಲ್ಲಿಕಾರ್ಜುನ್ ಖರ್ಗೆ ಅಂತವರನ್ನ ಸಿಎಂ ಮಾಡಬೇಕು ಅಂತ ಹೇಳಿದ್ದೆ ಎನ್ನುವ ಮೂಲಕ ಪರೋಕ್ಷವಾಗಿ ದಲಿತರಿಗೆ ಸಿಎಂ ಸ್ಥಾನ ನೀಡುವಂತೆ ಆಗ್ರಹಿಸಿದರು.