newsics.com
ಗಂಗಾವತಿ ತಾಲ್ಲೂಕಿನ ಆನೆಗುಂದಿ ಬಳಿಯ ತುಂಗಭದ್ರಾ ನದಿಯ ದಡದಲ್ಲಿರೋ ವಿಜಯನಗರ ಸಾಮ್ರಾಜ್ಯದ ಶ್ರೇಷ್ಠ ಅರಸ ಶ್ರಿಕೃಷ್ಣದೇವರಾಯ ಅವರ ಸಮಾಧಿಯ ಮೇಲೆ ಮಾಂಸ ಶುದ್ದೀಕರಣ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ.
ಕೃಷ್ಣದೇವರಾಯ ಅವರ ಸಮಾಧಿ ಅಕ್ಷರಶಃ ಮಾಂಸದ ಅಂಗಡಿಯಾಗಿದೆ. 64 ಕಂಬಗಳನ್ನು ಒಳಗೊಂಡಿರುವ ಕೃಷ್ಣದೇವರಾಯ ಅವರ ಸಮಾಧಿ ಮಂಟಪದ ಒಂದು ಕಂಬಕ್ಕೆ ದುಷ್ಕರ್ಮಿಗಳು ಮೇಕೆ ಕಟ್ಟಿ ಮಾಂಸ ಸ್ವಚ್ಛ ಮಾಡಿದ್ದಾರೆ. ದುಷ್ಕರ್ಮಿಗಳು ಮಾಂಸ ಸ್ವಚ್ಛ ಮಾಡುತ್ತಿದ್ದ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಭಾರತೀಯ ಇತಿಹಾಸದಲ್ಲಿ ಶ್ರೇಷ್ಠ ಆಡಳಿತಗಾರರಾಗಿದ್ದ ವಿಜಯನಗರದ ಶ್ರೀ ಕೃಷ್ಣದೇವರಾಯರ ಸಮಾಧಿ ಜಾಗವನ್ನು ಮಾಂಸದ ಮಾರುಕಟ್ಟೆಯಾಗಿ ಪರಿವರ್ತಿಸಲಾಗಿದೆ ಎನ್ನಲಾಗಿದೆ.
ವಿಜಯನಗರದ ಶ್ರೀ ಕೃಷ್ಣದೇವರಾಯರ ಸಮಾಧಿಯ ದುಸ್ಥಿತಿ ಇದು. ಈ ಜಾಗವನ್ನು ಅಕ್ಷರಶಃ ಮಾಂಸದ ಮಾರುಕಟ್ಟೆಯಾಗಿ ಕೆಲ ಸ್ಥಳೀಯರು ಪರಿವರ್ತಿಸಿರುವುದು ಕನ್ನಡ ನಾಡಿನ ಹೆಮ್ಮೆಯ ಅರಸರಾದ ಅಸಾಮಾನ್ಯ ಆಡಳಿತಗಾರ, ಅಪ್ರತಿಮ ದಂಡನಾಯಕ ಶ್ರೀ ಕೃಷ್ಣದೇವರಾಯರಿಗೆ ಮಾಡಿದ ಅವಮಾನವಾಗಿದೆ .
ಹಿಂದೂ ದೇವಾಲಯಗಳನ್ನು ಕೆಡವಿ, ದೇಶದ ಸಂಪತ್ತನ್ನು ದೋಚಿ, ಸಾವಿರಾರು ಹಿಂದೂಗಳನ್ನು ಅಮಾನವೀಯಗಿ ಕೊಂದ ಔರಂಗಜೇಬನ ಸಮಾಧಿಗೆ ಪುರಾತತ್ವ ಸರ್ವೇಕ್ಷಣಾ ಇಲಾಖೆ [ASI] ತೆರಿಗೆದಾರರ ಹಣದಿಂದ ಸಂರಕ್ಷಣೆ ಮಾಡುತ್ತಿದೆ. ಆದರೆ, ವಿಜಯನಗರ ಸಾಮ್ರಾಜ್ಯವನ್ನು ವಿಸ್ತರಿಸಿದ ಪರಾಕ್ರಮಿ, ಕಲೆ,ಸಾಹಿತ್ಯ ರಂಗಗಳ ಪೋಷಕ ಶ್ರೀ ಕೃಷ್ಣದೇವರಾಯರ ಸಮಾಧಿಗೆ ಏಕೆ ಈ ರೀತಿಯಾದ ದಿವ್ಯ ನಿರ್ಲಕ್ಷ್ಯ? ಎಂಬುದು ಸದ್ಯದ ಪ್ರಶ್ನೆಯಾಗಿದೆ.
ಇದು ಕನ್ನಡಿಗರಿಗಷ್ಟೇ ಅಲ್ಲ ರಾಷ್ಟ್ರಕ್ಕೆ ಮಾಡಿದ ಅವಮಾನ, ಮಾಂಸವನ್ನು ಮಾರುತ್ತ ಸ್ಥಳದ ಪಾವಿತ್ರ್ಯತೆಯನ್ನು ಹಾಳು ಮಾಡುತ್ತಿರುವ ಇಂತವರನ್ನು ಜಿಲ್ಲಾಡಳಿತ ಕೂಡಲೇ ಜಾಗ ಖಾಲಿ ಮಾಡಲು ಸೂಚಿಸಬೇಕು ಹಾಗೂ ಇಲ್ಲಿ ನೈರ್ಮಲ್ಯ ಮತ್ತು ಸಮಾಧಿಯ ಪಾವಿತ್ರ್ಯತೆಯನ್ನು ಕಾಪಾಡುವ ಕೆಲಸವನ್ನು ಸರ್ಕಾರ ತುರ್ತಾಗಿ ಮಾಡಬೇಕಿದೆ.
Life style ಫಸ್ಟ್ ನೈಟ್‌ನಲ್ಲಿ ಕೇಸರಿ ಹಾಲು ಕುಡಿಯುವುದರ ಹಿಂದಿನ ಉದ್ದೇಶವೇನು?