newsics.com
ಬಾಲಿವುಡ್‌ನ ಸ್ಟಾರ್ ನಟ ಮಹೇಶ್ ಬಾಬುಗೆ ಜಾರಿ ನಿರ್ದೇಶನಾಲಯ (ಇಡಿ) ನೋಟಿಸ್ ಕೊಟ್ಟಿದೆ. ಇದರಿಂದ ಸ್ಟಾರ್ ಹೀರೋಗೆ ತೊಂದರೆ ಎದುರಾಗಿದೆ. ಸುರಾನ ಗ್ರೂಪ್ ಮತ್ತು ಸಾಯಿಸೂರ್ಯ ಡೆವಲಪರ್ಸ್ ಪ್ರಕರಣದಲ್ಲಿ ಇದೇ 28ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ನಲ್ಲಿ ತಿಳಿಸಲಾಗಿದೆ.
ಈ ಸಂಸ್ಥೆಯ ಪ್ರಚಾರಕ್ಕಾಗಿ ಮಹೇಶ್ ಬಾಬು ಅವರು 5.9ಕೋಟಿ ರೂ.ಗಳನ್ನು ತೆಗೆದುಕೊಂಡಿದ್ದರು ಎನ್ನಲಾಗಿದೆ.
ಏಪ್ರಿಲ್ 16ರಂದು ಇಡಿ ಅಧಿಕಾರಿಗಳು ಹೈದರಾಬಾದ್‌ನಲ್ಲಿ ಶೋಧ ನಡೆಸಿದ್ದರು. ಸುರಾನ ಗ್ರೂಪ್ ಮತ್ತು ಸಾಯಿಸೂರ್ಯ ಡೆವಲಪರ್ಸ್ ಕಚೇರಿಗಳು ಹಾಗೂ ಈ ಕಂಪನಿಗಳ ಮುಖ್ಯಸ್ಥರ ಮನೆಗಳ ಮೇಲೆ ದಾಳಿ ನಡೆಸಿತ್ತು. ಅದಾದ ನಂತರ ಈ ಬೆಳವಣಿಗೆ ನಡೆದಿದೆ. ಏಪ್ರಿಲ್ 28ರ ಬೆಳಿಗ್ಗೆ 10:30ಕ್ಕೆ ಮಹೇಶ್ ಬಾಬು ಹೈದರಾಬಾದ್ನಲ್ಲಿ ವಿಚಾರಣೆಗೆ ಹಾರಜಿ ಹಾಕಬೇಕಿದೆ. ಮಹೇಶ್ ಬಾಬು ತಮ್ಮ ಪತ್ನಿ ಮತ್ತು ಮಕ್ಕಳೊಂದಿಗೆ ಸಾಯಿಸೂರ್ಯ ಡೆವಲಪರ್ಸ್ ಜಾಹೀರಾತಿನಲ್ಲಿ ನಟಿಸಿದ್ದರು. ಮಹೇಶ್ ಬಾಬು ಪ್ರಸ್ತುತ ರಾಜಮೌಳಿ ಅವರ ಚಿತ್ರದ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ. ಈ ಚಿತ್ರದ ಚಿತ್ರೀಕರಣ ವೇಗವಾಗಿ ನಡೆಯುತ್ತಿದೆ. ಇದರ ಮಧ್ಯೆ ಅವರಿಗೆ ತೊಂದರೆ ಎದುರಾಗಿದೆ.
Avtor Darshan ಇಂದು ಸುಪ್ರಿಂ ನಲ್ಲಿ ನಟ ದರ್ಶನ್ ಜಾಮೀನು ಭವಿಷ್ಯ ನಿರ್ಧಾರ