newsics.com
ಹಾಸನ: ಅತ್ಯಾಚಾರ ಪ್ರಕರಣದಲ್ಲಿ ಬಂಧನವಾಗಿದ್ದ ವಕೀಲ ದೇವರಾಜೇಗೌಡ ಜೈಲಿನಿಂದ ಮಂಗಳವಾರ ಬಿಡುಗಡೆಯಾಗಿದ್ದಾರೆ.
2023ರ ಡಿ.29ರಂದು ರಂದು ಅತ್ಯಾಚಾರ ಮಾಡಿದ್ದಾರೆ ಎಂದು 2024ರ ಏ.1 ರಂದು ಸಂತ್ರಸ್ತೆ ದೂರು ನೀಡಿದ್ದರು. ಇದಕ್ಕೂ ಮೊದಲು ಹನಿಟ್ರ್ಯಾಪ್ ಎಂದು ದೇವರಾಜೇಗೌಡ ಮಾ.28 ರಂದು ದೂರು ನೀಡಿದ್ದರು.ದೇವರಾಜೇಗೌಡ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದ್ದರು. ವಾದ-ಪ್ರತಿವಾದ ಆಲಿಸಿದ ಬಳಿಕ ವಕೀಲ ದೇವರಾಜೇಗೌಡಗೆ ನ್ಯಾ. ಎಂ.ಜಿ.ಉಮಾ ಅವರಿದ್ದ ಹೈಕೋರ್ಟ್ ಪೀಠ ಜಾಮೀನು ನೀಡಿ ಆದೇಶಿಸಿತ್ತು.
ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ್ದ ನ್ಯಾ. ಎಂ.ಜಿ.ಉಮಾ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ ಸೋಮವಾರ ಜಾಮೀನು ಮಂಜೂರು ಮಾಡಿತ್ತು. ಹೀಗಾಗಿ ಇಂದು ದೇವರಾಜೇಗೌಡ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಜೂನ್ 5ರಂದು ಹಾಸನ ಜಿಲ್ಲಾ ನ್ಯಾಯಾಲಯಕ್ಕೆ ದೇವರಾಜೇಗೌಡ ಜಾಮೀನು ಅರ್ಜಿ ಸಲ್ಲಿಸಿದಾಗ ಕೋರ್ಟ್ ನಿರಾಕರಿಸಿತ್ತು. ಆದರೆ, ಹೈಕೋರ್ಟ್ ಜಾಮೀನು ನೀಡಿದ್ದರಿಂದ ಹಾಸನ ಜಿಲ್ಲಾ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ದೇವರಾಜೇಗೌಡರನ್ನು ಬಿಡುಗಡೆ ಮಾಡಲಾಗಿದೆ.