ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಳಿಯಲ್ಲಿ 27 ಮಂದಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಅಲ್ಲದೇ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.
ಮೂಲಗಳ ಪ್ರಕಾರ 27 ಮಂದಿ ಸಾವು ಕಂಡಿದ್ದಾರೆ. ಸಾವಿನ ಸಂಖ್ಯೆಯಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ ಎನ್ನಲಾಗಿದೆ.
ಇದೀಗ ಗೃಹ ಸಚಿವ ಅಮಿತ್ ಶಾ ತಕ್ಷಣವೇ ಶ್ರೀನಗರಕ್ಕೆ ತೆರಳಿದ್ದಾರೆ ಎಂದು ವರದಿಯಾಗಿದೆ.
ಭಯೋತ್ಪಾದಕ ದಾಳಿಯ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು ಸೌದಿ ಅರೇಬಿಯಾದಿಂದಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಈ ಹಿನ್ನೆಲೆ ಅಮಿತ್ ಶಾ ತುರ್ತು ಸಭೆ ಕರೆದಿದ್ದಾರೆ. ಸಭೆಯಲ್ಲಿ ಐಬಿ ಗೃಹ ಕಾರ್ಯದರ್ಶಿ ಮತ್ತು ಗೃಹ ಸಚಿವಾಲಯದ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.