newsics.com
ಪಹಲ್ಗಾಮ್ ಪಟ್ಟಣ ಸಮೀಪದ ಹುಲ್ಲುಗಾವಲಿನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ಮಂಗಳವಾರ ನಡೆಸಿದ ಗುಂಡಿನ ದಾಳಿಯಲ್ಲಿ 28 ಮಂದಿ ಮೃತಪಟ್ಟು, ಕನಿಷ್ಠ 20 ಜನರು ಗಾಯಗೊಂಡಿದ್ದಾರೆ. ಇದರ ಬೆನ್ನಲ್ಲೇ, ಕಣಿವೆಯಾದ್ಯಂತ ಮುಖ್ಯವಾಗಿ ಪ್ರವಾಸಿ ತಾಣಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ಈ ದಾಳಿಯಿಂದ ಪಾಕಿಸ್ತಾನದಲ್ಲಿ ಭಯ ಹರಡಿದೆ. ಈ ದಾಳಿಯ ಹೊಣೆಯನ್ನು ರೆಸಿಸ್ಟೆನ್ಸ್ ಫ್ರಂಟ್ (ಟಿಆರ್‌ಎಫ್) ಎಂಬ ಭಯೋತ್ಪಾದಕ ಸಂಘಟನೆ ಹೊತ್ತುಕೊಂಡಿದೆ. ಈ ಸಂಘಟನೆಗೆ ಪಾಕಿಸ್ತಾನದ ಲಷ್ಕರ್-ಎ-ತೊಯ್ಬಾದೊಂದಿಗೆ ಸಂಬಂಧವಿದೆ ಎಂದು ಹೇಳಲಾಗುತ್ತಿದೆ. ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಈ ದಾಳಿಗೆ ತಮ್ಮ ದೇಶಕ್ಕೆ ಸಂಬಂಧವಿಲ್ಲ ಹೇಳಿದ್ದರು ಭಾರತವು ಈ ದಾಳಿಗೆ ಪಾಕಿಸ್ತಾನದ ಕೈವಾಡವಿದೆ ಎಂದು ಆರೋಪಿಸಿದೆ.ಈ ದಾಳಿಯ ನಂತರ ಪಾಕಿಸ್ತಾನದ ಸೇನೆ ಮತ್ತು ವಾಯುಪಡೆ ಕಟ್ಟುನಿಟ್ಟಿನ ಎಚ್ಚರಿಕೆಯಲ್ಲಿದೆ.ಭಾರತವು ಈ ದಾಳಿಯನ್ನು ಸುಲಭವಾಗಿ ತೆಗೆದುಕೊಳ್ಳುವುದಿಲ್ಲ ಎಂಬುದು ಸ್ಪಷ್ಟವಾಗಿದೆ. ಹಾಗಾಗಿ ಪಾಕಿಸ್ತಾನಿ ಸೈನ್ಯ ಇಡೀ ರಾತ್ರಿ ನಿದ್ದೆ ಮಾಡಿಲ್ಲ.
ಪಾಕಿಸ್ತಾನದ ವಾಯುಪಡೆಯ ವಿಮಾನಗಳು ಗಡಿಯ ಬಳಿ ಹಾರಾಟ ನಡೆಸುತ್ತಿವೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ವಿಮಾನಗಳಲ್ಲಿ PAF198, PAF101 ಮತ್ತು PAF177 ಸೇರಿವೆ. ಇವು ಕರಾಚಿಯಿಂದ ಲಾಹೋರ್ ಮತ್ತು ರಾವಲ್ಪಿಂಡಿಯ ನೆಲೆಗಳಿಗೆ ಹೋಗುತ್ತಿವೆ ಎಂದು ಹೇಳಲಾಗಿದೆ. ಆದರೆ, ಈ ಬಗ್ಗೆ ಯಾವುದು ಮಾಹಿತಿ ಸಿಕ್ಕಿಲ್ಲ.