Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಾಲೇಜು ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ ಖಾಸಗಿ ಕಾಲೇಜು ಫಸ್ಟ್ ಪಿಯು ವಿದ್ಯಾರ್ಥಿನಿ!
ಕರ್ನಾಟಕ

ಕಾಲೇಜು ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ ಖಾಸಗಿ ಕಾಲೇಜು ಫಸ್ಟ್ ಪಿಯು ವಿದ್ಯಾರ್ಥಿನಿ!

Share
2 Min Read
SHARE

newsics.com

ಕೋಲಾರ: ಕಲಬುರಗಿ ಹಾಸ್ಟೆಲ್‌ನಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿ ಮಗುವಿಗೆ ಜನ್ಮ ನೀಡಿದ ಘಟನೆ ಮರೆಯುವ ಮುನ್ನವೇ ನಗರದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿನಿಯೊಬ್ಬಳು (17) ಕಾಲೇಜಿನ ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿರುವ ಘಟನೆ ಬೆಳಕಿಗೆ ಬಂದಿದೆ.

ಕೋಲಾರ ಹೊರವಲಯದ ಖಾಸಗಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿನಿ ಕಾಲೇಜಿನ ಶೌಚಾಲಯದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಬಾಲಕಿಯು ಶ್ರೀನಿವಾಸಪುರ ತಾಲೂಕಿನಿಂದ ಕಾಲೇಜಿಗೆ ಬರುತ್ತಿದ್ದಳು ಎನ್ನಲಾಗಿದೆ.

ಕಾಲೇಜಿನಲ್ಲಿದ್ದಾಗ ಹೊಟ್ಟೆನೋವೆಂದು ಶೌಚಾಲಯಕ್ಕೆ ಹೋಗಿದ್ದ ವಿದ್ಯಾರ್ಥಿನಿ ಅಲ್ಲೇ ಮಗುವಿಗೆ ಜನ್ಮ ನೀಡಿದ್ದಾಳೆ. ಆದರೆ, ಆಕೆಗೆ ತಾನು ಗರ್ಭಿಣಿ ಎನ್ನುವುದು ಕೂಡ ಗೊತ್ತೇ ಇರಲಿಲ್ಲ ಎಂದು ತಿಳಿದುಬಂದಿದೆ.

ವಿದ್ಯಾರ್ಥಿನಿಯನ್ನು ಆ‌ರ್.ಎಲ್. ಜಾಲಪ್ಪ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ಹುಡುಕಾಟ ನಡೆಸಿದಾಗ ಮುಳಬಾಗಿಲಿನ ಅನಿಲ್‌ ಕುಮಾರ್‌ (21) ಎಂಬಾತ ಬಾಲಕಿ ಗರ್ಭಿಣಿ ಆಗಲು ಕಾರಣ ಎಂದು ತಿಳಿದುಬಂದಿದೆ. ಆತನನ್ನು ನಗರದ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಶೌಚಾಲಯ ಗುಂಡಿಗೆ ಶಿಶು ಎಸೆದಿದ್ದ ವಿದ್ಯಾರ್ಥಿನಿ!:

ಕೋಲಾರದ ಕಾಲೇಜೊಂದರಲ್ಲಿ 2023ರಲ್ಲೂ ಇಂಥದ್ದೇ ಒಂದು ಘಟನೆ ನಡೆದಿತ್ತು. ಬಾಲಕಿ ಕಾಲೇಜಿನ ಶೌಚಾಲಯದಲ್ಲಿ ಮಗುವನ್ನು ಸಾಯಿಸಿ ಅದರೊಳಗೆ‌ ಹಾಕಿ ಘಟನೆ ಮುಚ್ಚಿಹಾಕುವ ಪ್ರಯತ್ನ ನಡೆದಿತ್ತು ಎನ್ನುವ ಅಂಶ ಇದೀಗ ಬೆಳಕಿಗೆ ಬಂದಿದೆ.

ಕೋಲಾರ ನಗರದ ಹೊರವಲಯದ ಖಾಸಗಿ ಕಾಲೇಜುವೊಂದರಲ್ಲಿ2023ರಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ಬಾಲಕಿಯೊಬ್ಬಳು ಶೌಚಾಲಯದಲ್ಲಿ ಮಗು ಜನ್ಮ ನೀಡಿದ್ದಳು. ಆದ್ರೆ, ಆ ಬಾಲಕಿ ಮಗುವಿನ ಕತ್ತು ಹಿಸುಕಿ ಸಾಯಿಸಿ ಶೌಚಾಲಯದೊಳಗೆ ತುರುಕಿದ್ದಳು. ನಂತರ ತಾಯಿಯನ್ನು ಕರೆಸುವಂತೆ ಉಪನ್ಯಾಸಕರಿಗೆ ಹೇಳಿದ್ದಳು. ನಂತರ ಸ್ವಚ್ಛತಾ ಸಿಬ್ಬಂದಿ ಶೌಚಾಲಯ ಸ್ವಚ್ಛಗೊಳಿಸಲು ಹೋದಾಗ ಮಗುವಿರುವುದು ಪತ್ತೆಯಾಗಿತ್ತು. ವಿಚಾರಣೆ ನಡೆಸಿದಾಗ ಬಾಲಕಿ ತಾನೇ ಮಗುವನ್ನು ಸಾಯಿಸಿರುವುದಾಗಿ ಒಪ್ಪಿಕೊಂಡಿದ್ದಳು.

ಬಾಲಕಿಯು ಫೇಸ್‌ಬುಕ್‌ನಲ್ಲಿ ಪರಿಚಯವಾಗಿದ್ದ ಯುವಕನ ಪರಿಚಯ ಮಾಡಿಕೊಂಡು ಆತನೊಂದಿಗೆ ಸಲುಗೆ ಇಟ್ಟುಕೊಂಡಿದ್ದಳು ಎಂದು ತಿಳಿದು ಬಂದಿದೆ. ಈಗ ಮತ್ತದೇ ರೀತಿಯ ಘಟನೆ ಮರುಕಳಿಸಿದ್ದು , ಪ್ರಥಮ ಪಿಯುಸಿ ಓದುತ್ತಿದ್ದ ಬಾಲಕಿಗೆ ಕಾಲೇಜಿನ ಶೌಚಾಲಯದಲ್ಲಿ ಹೆರಿಗೆಯಾಗಿದೆ, ಸದ್ಯ ಆರೋಪಿ ಅನಿಲ್ ಕುಮಾರ್ ನನ್ನು ಬಂಧಿಸಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಏನಿದು‌ ಕಲಬುರಗಿ ಘಟನೆ?:

ಕಳೆದ ವರ್ಷ ಡಿಸೆಂಬ‌ರ್‌ನಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿ ಹಾಸ್ಟೆಲ್‌ನಲ್ಲೇ ಮಗುವಿಗೆ ಜನ್ಮ ನೀಡಿದ್ದಳು.

ಬಳಿಕ ನವಜಾತ ಶಿಶುವಿನೊಂದಿಗೆ ವಿದ್ಯಾರ್ಥಿನಿಯನ್ನು ಕಲಬುರಗಿಯ ಶಿಶು ಗೃಹಕ್ಕೆ ದಾಖಲಿಸಲಾಗಿತ್ತು.

ನಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಾಗ ಬಾಲಕಿ ಮಗುವಿಗೆ ಜನ್ಮ ನೀಡಲು ಕಾರಣವಾದವನು ಅಪ್ರಾಪ್ತೆಯ ಸೋದರ ಸಂಬಂಧಿ ಎನ್ನುವುದು ಗೊತ್ತಾಗಿತ್ತು. ನಂತರ ಆತನನ್ನು ಪತ್ತೆ ಮಾಡಿ ಪೋಕ್ಸೊ ಕಾಯ್ದೆಯಡಿ ಬಂಧಿಸಿದ್ದರು.

ಪೌರ ಕಾರ್ಮಿಕರಿಗೆ ವಾರಕ್ಕೆ ಒಂದು ದಿನ ರಜೆ ನೀಡಿದ ಸರ್ಕಾರ

ಮಗಳ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿಯಾಗಿಸಿದ ಅಪ್ಪನಿಗೆ 101 ವರ್ಷ ಜೈಲು

ತಿಂಗಳಿಗೆ 52 ಲಕ್ಷ ರೂ. ಕರೆಂಟ್ ಬಿಲ್; ಶಾಕ್ ಆದ ಮಾಲೀಕ

ಅತ್ಯಾಚಾರ ಕೇಸ್‌; ಜೈಲಿನಿಂದ ವಕೀಲ ದೇವರಾಜೇಗೌಡ ರಿಲೀಸ್‌

TAGGED:First PU student private college who gave birth to a child college toilet Kolar newsics
Share This Article
Facebook Twitter Copy Link Print
Previous Article ಕಲ್ಪನಾ ರೀ ಕ್ರಿಯೇಟ್ ಮಾಡಿದ ಕಿರುತೆರೆ ನಟಿ ರಜಿನಿ
Next Article ಶುಭೋದಯ… ಕ್ರೋಧಿ ಸಂವತ್ಸರ, ಜ್ಯೇಷ್ಠ ಮಾಸ, ಕೃಷ್ಣ ಪಕ್ಷ, ದ್ವಾದಶಿ/ ತ್ರಯೋದಶಿ, ಬುಧವಾರ, 3 ಜುಲೈ 2024

Popular Posts

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಕರ್ನಾಟಕಪ್ರಮುಖ

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?