newsics.com
ಜಮ್ಮು ಕಾಶ್ಮೀರ: ಪಹಲ್ಗಾಮ್ ನಲ್ಲಿ ನಡೆಸಿದ ದಾಳಿಯಲ್ಲಿ 26 ಮಂದಿ ಪ್ರಾಣ ಕಳೆದುಕೊಂಡಿದ್ದು, 10ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಈ ದಾಳಿ ನಡೆಸಿದ ಶಂಕಿತ ಉಗ್ರರ ರೇಖಾಚಿತ್ರಗಳನ್ನು ಜಮ್ಮು ಕಾಶ್ಮೀರ ಪೊಲೀಸರು ಹಂಚಿಕೊಂಡಿದ್ದು, ಅವರ ಬಗ್ಗೆ ಸುಳಿವು ಕೊಟ್ಟವರಿಗೆ 20 ಲಕ್ಷ ರೂ.ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ.
ಸಾರ್ವಜನಿಕರಿಗೆ ಮನವಿ ಮಾಡಿರುವ ಪೊಲೀಸರು, ಮಾಹಿತಿದಾರರ, ಗುರುತನ್ನು ಗೌಪ್ಯವಾಗಿಡಲಾಗುವುದು ಎಂದು ಭರವಸೆ ನೀಡಿದ್ದಾರೆ. ಯಾವುದೇ ಸಂಬಂಧಿತ ಮಾಹಿತಿಯನ್ನು ಹೊಂದಿರುವ ನಾಗರಿಕರು ಅನಂತ್‌ನಾಗ್‌ನ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (SSP) ಅಥವಾ ಪೊಲೀಸ್ ನಿಯಂತ್ರಣ ಕೊಠಡಿ (PCR) ಅವರನ್ನು ನೇರವಾಗಿ ಈ ಕೆಳಗಿನ ಸಂಪರ್ಕ ಸಂಖ್ಯೆಗಳಲ್ಲಿ ಸಂಪರ್ಕಿಸಲು ಕೋರಲಾಗಿದೆ.
ಎಸ್‌ಎಸ್ಪಿ ಅನಂತನಾಗ್ : 9596777666, ಪಿಸಿಆರ್ ಅನಂತನಾಗ್ : 9596777669 ಇ- ಮೇಲ್ : [email protected] ಮಾಹಿತಿ ನೀಡಬಹುದು. ಕಾಶ್ಮೀರ ಕಣಿವೆಯಲ್ಲಿ ಸಾರ್ವಜನಿಕರ ಸುರಕ್ಷತೆಗೆ ಯಾವುದೇ ಅಡಚಣೆ ಉಂಟಾಗದಂತೆ ತಡೆಯಲು ಕಾನೂನು ಜಾರಿ ಸಂಸ್ಥೆಗಳು ಪ್ರಯತ್ನಗಳನ್ನು ತೀವ್ರಗೊಳಿಸಿವೆ.
Gautam Gambhir Gets Death Threat ಗೌತಮ್ ಗಂಭೀರ್ ಗೆ ಜೀವ ಬೆದರಿಕೆ