newsics.com
ಬೆಂಗಳೂರು : ವಾಯುಭಾರ ಕುಸಿತಗೊಂಡ ಹಿನ್ನೆಲೆ ರಾಜ್ಯದಲ್ಲಿ ಏ.29 ರವರೆಗೂ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ, ಗದಗ, ಧಾರವಾಡ, ಕೊಪ್ಪಳ, ರಾಯಚೂರು, ಕಲಬುರ್ಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ, ದಾವಣಗೆರೆ, ಬಳ್ಳಾರಿ, ವಿಜಯನಗರ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಏ.29 ರವರೆಗೂ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ವಿಜಯಪುರ, ಕೊಪ್ಪಳ, ಯಾದಗಿರಿ, ಕಲಬುರ್ಗಿ, ಹಾಸನ, ಮೈಸೂರು, ಕೊಡಗು, ತುಮಕೂರು, ಮಂಡ್ಯ, ಚಿಕ್ಕಮಂಗಳೂರು, ರಾಮನಗರ, ಬೆಂಗಳೂರು ನಗರ, ಗ್ರಾಮಾಂತರ ಚಿಕ್ಕಬಳ್ಳಾಪುರದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.