newsics.com
ಕಲಬುರಗಿ: ಅಡ್ಡ ಬಂದ ನಾಯಿ ಜೀವ ಉಳಿಸುವ ಹೋಗಿ ಟವೆರಾ ಕಾರು ನಿಯಂತ್ರಣ ತಪ್ಪಿ ಅಲ್ಲೇ ಪಕ್ಕದಲ್ಲಿದ್ದ ಕಲ್ಲಿನ ಕಂಬಗಳಿಗೆ ರಭಸವಾಗಿ ಡಿಕ್ಕಿ ಹೊಡೆದು ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ಅಫಜಲಪುರ ತಾಲೂಕಿನ ಗೊಬ್ಬೂರು ಗ್ರಾಮದ ಬಳಿ ನಡೆದಿದೆ.
ಕಲಬುರಗಿಯ ಮಿಲ್ಲತ್ ನಗರದ ಆಯೇಷಾ(70), ಅಜ್ಮೇರಾ(30), ಜೈನಬ್(2) ಮೃತಪಟ್ಟವರು ಎಂದು ತಿಳಿದು ಬಂದಿದೆ.
ಮಹಾರಾಷ್ಟ್ರ ಗಡಿಭಾಗದ ಹೈದ್ರಾ ದರ್ಗಾದಲ್ಲಿ ನಡೆಯುತ್ತಿದ್ದ ಸಂಬಂಧಿಕರ ಮಗುವಿನ ಜಾವಳ ಕಾರ್ಯಕ್ರಮಕ್ಕೆ ಟವೆರಾ ಕಾರಿನಲ್ಲಿ ಕುಟುಂಬ ಸಮೇತರಾಗಿ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ.