ಚಾಮರಾಜನಗರ: ರಾಜ್ಯದಲ್ಲಿ ಅವಧಿ ಮೀರಿ ನೆಲೆಸಿರುವ ವಿದೇಶಿಗರ ಬಗ್ಗೆ ಎಚ್ಚರಿಕೆ ವಹಿಸಲು ಗೃಹ ಇಲಾಖೆಗೆ ಸೂಚನೆ ನೀಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮಲೆ ಮಹದೇಶ್ವರ ಹೆಲಿಪ್ಯಾಡ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನೆಲೆಸಿರುವ ವಿದೇಶಿಗಳ ಬಗ್ಗೆ ನಿಗಾ ಇರಿಸಲು ಕೇಂದ್ರ ಗೃಹ ಸಚಿವರು ಸೂಚಿಸಿದ್ದಾರೆ. ಉಗ್ರರು ಯಾವುದೇ ರಾಜ್ಯದಲ್ಲಿರಲಿ ಅವರನ್ನು ಮಟ್ಟಹಾಕಬೇಕಾಗಿರುವುದು ಕೇಂದ್ರ ಸರ್ಕಾರದ ಜವಾಬ್ದಾರಿಯಾಗಿದೆ ಎಂದರು.
ಪಹಲ್ಗಾಮ್ ಘಟನೆ ಅತ್ಯಂತ ಖಂಡನೀಯವಾದ ಹಾಗೂ ಅಮಾನುಷವಾದ ಘಟನೆ. ಇದನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಹೇಳಿದರು.