Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಹತ್ರಾಸ್ ಕಾಲ್ತುಳಿತ: ಮೃತರ ಸಂಖ್ಯೆ 116ಕ್ಕೇರಿಕೆ, ಹೆಣಗಳ ರಾಶಿ ನೋಡಿ ಹೃದಯಾಘಾತದಿಂದ ಪೊಲೀಸ್ ಸಾವು
ದೇಶಪ್ರಮುಖ

ಹತ್ರಾಸ್ ಕಾಲ್ತುಳಿತ: ಮೃತರ ಸಂಖ್ಯೆ 116ಕ್ಕೇರಿಕೆ, ಹೆಣಗಳ ರಾಶಿ ನೋಡಿ ಹೃದಯಾಘಾತದಿಂದ ಪೊಲೀಸ್ ಸಾವು

Share
1 Min Read
SHARE

newsics.com
ಹತ್ರಾಸ್: ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯ ಫುಲ್ರೈ ಗ್ರಾಮದಲ್ಲಿ ಮಂಗಳವಾರ ನಡೆದ ಸತ್ಸಂಗದಲ್ಲಿ ಕಾಲ್ತುಳಿತ ಉಂಟಾಗಿ 116 ಜನರು ಸಾವನ್ನಪ್ಪಿದ್ದಾರೆ. ಹಲವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಆತಂಕವಿದೆ.

ಈ ಮಧ್ಯೆ, ಆಸ್ಪತ್ರೆಯಲ್ಲಿ ಭದ್ರತಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ರಜನೀಶ್ ಎಂಬ ಪೋಲೀಸ್ ಸಿಬ್ಬಂದಿ ಇಟಾಹ್ ಜಿಲ್ಲಾ ಆಸ್ಪತ್ರೆಯಲ್ಲಿ ಬಿದ್ದಿದ್ದ ಹೆಣಗಳ ರಾಶಿ ನೋಡಿದ ನಂತರ ತೀವ್ರ ಹೃದಯಾಘಾತಕ್ಕೆ ಒಳಗಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇಟಾಹ್ ಮೆಡಿಕಲ್ ಕಾಲೇಜಿನಲ್ಲಿ ತುರ್ತು ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ರಜನೀಶ್ ಮೃತದೇಹಗಳ ರಾಶಿಯನ್ನು ನೋಡಿ ಹೃದಯಾಘಾತಕ್ಕೆ ಒಳಗಾಗಿದ್ದರು. ಅವರು ಅವಘರ್‌ನಲ್ಲಿ ಕ್ವಿಕ್ ರೆಸ್ಪಾನ್ಸ್ ಟೀಮ್ (ಕ್ಯೂಆರ್‌ಟಿ) ಭಾಗವಾಗಿದ್ದರು. ತುರ್ತು ಕರ್ತವ್ಯಕ್ಕಾಗಿ ಅವರನ್ನು ಆಸ್ಪತ್ರೆಗೆ ಕರೆಸಲಾಗಿತ್ತು. ಆದರೆ, ಅಲ್ಲಿ ಬಿದ್ದಿದ್ದ ಹೆಣಗಳು ಮತ್ತು ಗೋಳಾಡುತ್ತಿದ್ದ ಸಾವಿರಾರು ಜನರನ್ನು ನೋಡಿ ಹೃದಯಾಘಾತಕ್ಕೊಳಗಾಗಿ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಹತ್ರಾಸ್ ದುರಂತಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.

ಮೋದಿಯವರು ಮೃತರ ಕುಟುಂಬಕ್ಕೆ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ 50,000 ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ಸ್ಥಳೀಯ ಸಂಘಟಕರು ‘ಭೋಲೆ ಬಾಬಾ’ ಕಾರ್ಯಕ್ರಮ ಏರ್ಪಡಿಸಿದ್ದರು. ಕಾರ್ಯಕ್ರಮದ ನಂತರ, ಸತ್ಸಂಗದ ಪ್ರಚಾರಕರು ವೇದಿಕೆಯಿಂದ ಕೆಳಗಿಳಿಯುತ್ತಿದ್ದಂತೆ ಅವರನ್ನು ಸ್ಪರ್ಶಿಸಲು ಭಕ್ತ ಸಮೂಹವು ಅವರ ಕಡೆಗೆ ನುಗ್ಗಿತು. ಸ್ವಯಂಸೇವಕರು ಅವರನ್ನು ತಡೆಯಲು ಪ್ರಯತ್ನಿಸಿದಾಗ ಈ ಕಾಲ್ತುಳಿತ ಸಂಭವಿಸಿದೆ ಎಂದು ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ಪ್ರಕರಣದ ತನಿಖೆಗಾಗಿ ಹೆಚ್ಚುವರಿ ಡಿಜಿ ಆಗ್ರಾ ಅವರ ಅಧ್ಯಕ್ಷತೆಯಲ್ಲಿ ತಂಡವನ್ನು ರಚಿಸಿದ್ದೇವೆ ಮತ್ತು ವಿವರವಾದ ವರದಿಯನ್ನು ನೀಡುವಂತೆ ಕೇಳಿದ್ದೇವೆ. ರಾಜ್ಯದ ಮುಖ್ಯ ಕಾರ್ಯದರ್ಶಿ ಮತ್ತು ಡಿಜಿಪಿ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ. ಮೂವರು ರಾಜ್ಯ ಸಚಿವರಾದ ಚೌಧರಿ ಲಕ್ಷ್ಮೀ ನಾರಾಯಣ್, ಸಂದೀಪ್ ಸಿಂಗ್ ಮತ್ತು ಅಸಿಮ್ ಅರುಣ್ ಕೂಡ ಸ್ಥಳದಲ್ಲಿದ್ದಾರೆ ಎಂದು ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ಕಾಲೇಜು ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ ಖಾಸಗಿ ಕಾಲೇಜು ಫಸ್ಟ್ ಪಿಯು ವಿದ್ಯಾರ್ಥಿನಿ!

ದಿನ ಭವಿಷ್ಯ- 3-7-2024, ಮೇಷ- ಘನತೆಗೆ ಧಕ್ಕೆ ಸಾಧ್ಯತೆ, ಮೀನ- ಆದಾಯಕ್ಕಿಂತ ಖರ್ಚು ಜಾಸ್ತಿ, ನಿಮ್ಮ ರಾಶಿ ಭವಿಷ್ಯದಲ್ಲೇನಿದೆ?

TAGGED:Hathras stampede death toll rises to 116 policeman dies of heart attack seeing pile of coffins newsics
Share This Article
Facebook Twitter Copy Link Print
Previous Article ಕನ್ನಡದ ಆ ಸ್ಟಾರ್ ನಟಿ ಜೊತೆ ಅಪ್ಪ-ಮಗ ಇಬ್ರೂ ಡೇಟ್ ಮಾಡಿದ್ರು!
Next Article 4ವರ್ಷಗಳ ಬಳಿಕ ಕುಟುಂಬದವರನ್ನು ನೋಡಲು ತಾಯ್ನಾಡಿಗೆ ಆಗಮಿಸುತ್ತಿದ್ದ ಯುವತಿ ವಿಮಾನದಲ್ಲೇ ಹಠಾತ್ ಸಾವು

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?