newsics.com
ನವದೆಹಲಿ : ಪಹಲ್ಗಾಮ್ ನಲ್ಲಿ ನಡೆದಂತಹ ಉಗ್ರರ ದಾಳಿಗೆ ಇದೀಗ ಕೇಂದ್ರ ಸರ್ಕಾರ ಹಲವು ಕಠಿಣ ಕ್ರಮ ಕೈಗೊಂಡಿದೆ.
ಇದರ ಬೆನ್ನಲ್ಲೇ ಪಾಕ್ ವಿರುದ್ಧ ರಾಜತಾಂತ್ರಿಕ ಸಂಬಂಧ ಕಡಿದುಕೊಂಡ ಕೇಂದ್ರ ಸರ್ಕಾರ ಸಂಸತ್ ಭವನದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಧ್ಯಕ್ಷತೆಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭವಾಗಿದೆ.
ಸಭೆ ಆರಂಭಿಸವುದಕ್ಕೂ ಮುನ್ನ ಉಗ್ರರ ಗುಂಡಿಗೆ ಬಲಿಯಾದವರಿಗೆ ಸಂತಾಪ ಸೂಚಿಸಲಾಯಿತು.ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ವಿದೇಶಾಂಗ ಸಚಿವ ಜೈ ಶಂಕರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಾಹುಲ್ ಗಾಂಧಿ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ಸಭೆಯಲ್ಲಿ ಪಾಕಿಸ್ತಾನ ವಿರುದ್ಧ ಏನು ಕ್ರಮ ಕೈಗೊಳ್ಳಬೇಕು ಎನ್ನುವುದರ ಕುರಿತು ಚರ್ಚೆಯಾಗಲಿದೆ.