newsics.com
ಶೃಂಗೇರಿ: ಹಿರಿಯ ಕಾಂಗ್ರೆಸ್ ಧುರೀಣ, ಶೃಂಗೇರಿ ಕ್ಷೇತ್ರದ ಮಾಜಿ ಶಾಸಕ, ಸಚಿವ ಬೇಗಾನೆ ರಾಮಯ್ಯ ಅವರು ನಿಧನರಾಗಿದ್ದಾರೆ.
ಬೇಗಾನೆ ರಾಮಯ್ಯ ಅವರು ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದಾರೆ. ಈ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿ ಕಳೆದ ಒಂದು ವಾರದಿಂದ ಚಿಕಿತ್ಸೆ ಪಡೆಯುತ್ತಿದ್ದರು.ಇಂದು ಚಿಕಿತ್ಸೆ ಫಲಿಸದೇ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.
1972 ರಲ್ಲಿ ನರಸಿಂಹರಾಜಪುರ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ರಾಜಕೀಯ ಜೀವನ ಆರಂಭಿಸಿದ್ದರು. 1978 ರಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿ ಜಯಗಳಿಸಿದ ಬೇಗಾನೆ ರಾಮಯ್ಯ ಕಾಂಗ್ರೆಸ್ ಸರ್ಕಾರದಲ್ಲಿ ಗ್ರಾಮೀಣಾಭಿವೃದ್ಧಿ ಗ್ರಾಮೀಣ ನೀರು ಪೂರೈಕೆ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಇಂದಿರಾಗಾಂಧಿ, ಪ್ರಣಬ್ ಮುಖರ್ಜಿ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು.