newsics.com
ದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯ ನಂತರ ಸರ್ಕಾರ ಸರ್ವಪಕ್ಷ ಸಭೆಯನ್ನು ಕರೆದಿತ್ತು.
ಉಗ್ರರ ವಿರುದ್ಧ ಭಾರತದ ರಾಜಕಾರಣಿಗಳು ತೊಡೆತಟ್ಟಿದ್ದಾರೆ. ಇಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಸರ್ವ ಪಕ್ಷಗಳ ಸಭೆ ನಡೆದಿದ್ದು, ಸುಮಾರು 2 ಗಂಟೆಗಳ ಕಾಲ ಚರ್ಚೆ ನಡೆಸಲಾಯ್ತು. ಈ ವೇಳೆ ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ಕೇಂದ್ರ ಸರ್ಕಾರ ಕೈಗೊಳ್ಳುವ ಎಲ್ಲಾ ನಿರ್ಧಾರಕ್ಕೂ ನಾವು ಬದ್ಧ ಅಂತ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಸರ್ವಪಕ್ಷ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್, ನಿರ್ಮಲಾ ಸೀತಾರಾಮನ್, ಕಿರಣ್ ರಿಜಿಜು, ಜೆ.ಪಿ ನಡ್ಡಾ ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ , ಅಸ್ಸಾಂ ಸಿಎಂ ಹಿಮಾಂತ ಬಿಸ್ವಾ ಶರ್ಮಾ ಸೇರಿದಂತೆ ಹಲವು ನಾಯಕರು ಪಾಲ್ಗೊಂಡಿದ್ದರು.