newsics.com
ಬೆಂಗಳೂರು: ವ್ಯಕ್ತಿಯೊಬ್ಬನನ್ನ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದ ಘಟನೆ ನಗರದ ಕಾಕ್ಸ್‌ಟೌನ್ ಸಮೀಪ ಇಂದು ನಡೆದಿದೆ. ಅಜಿತ್ ಎಂಬಾತನೇ ಕೊಲೆಯಾದ ದುರ್ದೈವಿಯಾಗಿದ್ದಾನೆ.
ಕೊಲೆಯಾದ ಅಜಿತ್ ಐಟಿಸಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ, ಕೆಲಸ ಮುಗಿಸಿ ವಾಪಸ್ ಮನೆಗೆ ಬರುವಾಗ ಮನೆಯ ಎದುರೇ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಅಜಿತ್‌ನನ್ನ ಭೀಕರವಾಗಿ ಹತ್ಯೆ ಮಾಡಿದ್ದಾರೆ. ಭೇಟಿ ಪರಿಶೀಲನೆ ನಡೆಸಿದ್ದಾರೆ.
ಮೃತ ಅಜಿತ್ ಬಾಣಸವಾಡಿಯಲ್ಲಿ ವಾಸವಾಗಿದ್ದು, ಬಡ್ಡಿಗಾಗಿ ಹಣ ಪಡೆದಿದ್ದನಂತೆ. ಹಣ ಕೊಡದೆ ಸತಾಯಿಸ್ತಿದ್ದ ಎಂಬ ಕಾರಣಕ್ಕೆ ಕೊಲೆ ಮಾಡಿರೋ ಶಂಕೆ ವ್ಯಕ್ತವಾಗಿದೆ. ದೊಡ್ಡಗುಂಟ ಬಳಿ ಶೆಡ್‌ನಲ್ಲಿ ಡ್ಯೂಟಿ ಮುಗಿಸಿ ಬಟ್ಟೆ ಬದಲಿಸಲು ಆಗಮಿಸಿದ್ದ ವೇಳೆಯೇ ನಾಲ್ಕೈದು ಮಂದಿ ದುಷ್ಕರ್ಮಿಗಳ ತಂಡ ಅಟ್ಯಾಕ್ ಮಾಡಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.